ನವದೆಹಲಿ: ಜಾರ್ಖಂಡ್ನ ನೂತನ ಮುಖ್ಯಮಂತ್ರಿಯಾಗಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ ಚಂಪೈ ಸೊರೆನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಪಟ್ಟ ಮಾಜಿ ಸಿಎಂ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ ನಂತರ ಚಂಪೈ ಅವರು ಗುರುವಾರ ಜಾರ್ಖಂಡ್ನಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ಜಾರ್ಖಂಡ್ನ ಹೊಸ ಸರ್ಕಾರದಲ್ಲಿ ಸಿಎಂ ಚಂಪೈ ಜೊತೆಗೆ ಅಲಂಗೀರ್ ಆಲಂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಗುರುವಾರ, ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ರಾಜ್ಯದಲ್ಲಿ ಸರ್ಕಾರವನ್ನು ಸ್ಥಾಪಿಸಲು ರಾಜಭವನಕ್ಕೆ ಚಂಪೈ ಸೊರೆನ್ ಅವರಿಗೆ ಆಹ್ವಾನ ನೀಡಿದರು. ಮುಂದಿನ 10 ದಿನಗಳಲ್ಲಿ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವ ಜವಾಬ್ದಾರಿಯನ್ನು ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರ ಬೆಂಬಲಿಗ ಚಂಪೈ ಸೊರೆನ್ ಅವರಿಗೆ ವಹಿಸಲಾಗಿದೆ.
ಗುರುವಾರ, ಚಂಪೈ ಸೊರೆನ್ ಅವರು 43 ಶಾಸಕರೊಂದಿಗೆ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರು ಗಂಟೆಗಳ ವಿಚಾರಣೆಯ ನಂತರ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ರಾತ್ರಿ ಸೋರೆನ್ ಅವರನ್ನು ಬಂಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.