ನವದೆಹಲಿ: 4ಜಿ ಮೊಬೈಲ್ ಸೇವೆಗಳನ್ನು ಆರಂಭಿಸುವ ಸಲುವಾಗಿ ರಿಲಾಯನ್ಸ್ ಕಮ್ಯುನಿಕೇಶನ್ ಮುಖ್ಯಸ್ಥ ಅನಿಲ್ ಅಂಬಾನಿ ಅವರು ತಮ್ಮ ಸಹೋದರ ಮುಖೇಶ್ ಅಂಬಾನಿ ಅವರೊಂದಿಗೆ ಕೈಜೋಡಿಸಿದ್ದಾರೆ.
ಈ ವರ್ಷದ ಅಂತ್ಯಕ್ಕೆ ರಿಲಾಯನ್ಸ್ ಕಮ್ಯುನಿಕೇಶನ್ 4ಜಿ ಮೊಬೈಲ್ಗಳನ್ನು ಬಿಡುಗಡೆ ಮಾಡಲಿದೆ. ಇದಕ್ಕಾಗಿ 1 ಲಕ್ಷ ಕೋಟಿ ಬಂಡವಾಳ ಹೂಡಿಕೆ ಮಾಡಲಾಗುತ್ತಿದೆ ಎನ್ನಲಾಗಿದೆ.
ತನ್ನ ಸಂಸ್ಥೆ ಹುಡಿಕೆದಾರರ ಸಭೆಯಲ್ಲಿ ಸ್ವತಃ ಅನಿಲ್ ಅಂಬಾನಿಯವರೇ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ತಮ್ಮ ಸಹೋದರನೊಂದಿಗೆ ಸೇರಿ ಜಿಯೋ ನೆಟ್ವರ್ಕ್ 4ಜಿ ಮೊಬೈಲ್ ಸೇವೆ ಆರಂಭಿಸುವುದಾಗಿ ಘೋಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.