ಡೆಹ್ರಾಡೂನ್: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ರಾಜ್ಯ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಮಂಡಿಸಿದರು. ಉತ್ತರಾಖಂಡದ ನಾಲ್ಕು ದಿನಗಳ ವಿಶೇಷ ಅಧಿವೇಶನ ನಿನ್ನೆ ಆರಂಭವಾಗಿದ್ದು, ಇದಂದು ಯುಸಿಸಿ ಮಸೂದೆ ಮಂಡನೆಗೊಂಡಿದೆ.
ಮಸೂದೆ ಜಾರಿಗೆ ಬಂದರೆ, ಉತ್ತರಾಖಂಡವು ಸ್ವಾತಂತ್ರ್ಯದ ನಂತರ ಯುಸಿಸಿ ಅನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಲಿದೆ. ಯುಸಿಸಿ ಪೋರ್ಚುಗೀಸರ ಆಳ್ವಿಕೆಯ ದಿನಗಳಿಂದಲೂ ಗೋವಾದಲ್ಲಿ ಜಾರಿಯಲ್ಲಿದೆ.
ಅದರ ಹೆಸರೇ ಸೂಚಿಸುವಂತೆ, ಯುಸಿಸಿಯು ಜಾತಿ ಮತ್ತು ಧರ್ಮವನ್ನು ಲೆಕ್ಕಿಸದೆ ರಾಜ್ಯದ ಎಲ್ಲಾ ಸಮುದಾಯಗಳಿಗೆ ಏಕರೂಪದ ನಾಗರಿಕ ಕಾನೂನುಗಳನ್ನು ಪ್ರಸ್ತಾಪಿಸುತ್ತದೆ. ಇದು ರಾಜ್ಯದ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳಿಗೆ ಕಾನೂನು ಚೌಕಟ್ಟನ್ನು ಒದಗಿಸುತ್ತದೆ.
2022 ರ ಉತ್ತರಾಖಂಡ ವಿಧಾನಸಭಾ ಚುನಾವಣೆಯ ಮೊದಲು ಯುಸಿಸಿ ಜಾರಿಗೊಳಿಸುವುದಾಗಿ ಬಿಜೆಪಿ ಭರವಸೆಯನ್ನು ನೀಡಿತ್ತು. ಅದರಂತೆ ಪುಷ್ಕರ್ ಧಾಮಿ ಸರ್ಕಾರ ಮಸೂದೆಯನ್ನು ಮಂಡನೆಗೊಳಿಸಿದೆ.
ಒಮ್ಮೆ ಉತ್ತರಾಖಂಡದಲ್ಲಿ ಇದು ಜಾರಿಗೆ ಬಂದರೆ ಇತರ ರಾಜ್ಯಗಳೂ ಇದನ್ನು ಅನುಸರಿಸುವ ಸಾಧ್ಯತೆ ಇದೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ತಮ್ಮ ರಾಜ್ಯದಲ್ಲೂ ಇದನ್ನು ಜಾರಿಗೆ ತರಲು ಯೋಜಿಸುತ್ತಿದ್ದಾರೆ, ಈ ಹಿಂದೆ ಸಾರ್ವಜನಿಕವಾಗಿ ಅವರು ಇದನ್ನು ಹೇಳಿದ್ದಾರೆ. ಇದು ರಾಷ್ಟ್ರೀಯವಾಗಿ ಯುಸಿಸಿ ಅನುಷ್ಠಾನಕ್ಕೆ ಒಂದು ಟೆಂಪ್ಲೇಟ್ ಆಗಿ ಕಾರ್ಯನಿರ್ವಹಿಸುವ ಸಾಧ್ಯತೆಯಿದೆ ಮತ್ತು ಗುಜರಾತ್ನಲ್ಲೂ ಇದನ್ನು ಜಾರಿಗೊಳಿಸುವ ಸಾಧ್ಯತೆಯಿದೆ.
#WATCH | Uttarakhand CM Pushkar Singh Dhami tables the Uniform Civil Code Uttarakhand 2024 Bill in State Assembly, in Dehradun. pic.twitter.com/B1LRzfoC09
— ANI (@ANI) February 6, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.