ಮಂಗಳೂರು : ಮಂಗಳೂರಿನಲ್ಲಿರುವ ಇ ಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ ಸಚಿವರಾದ ಶ್ರೀ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ಅವರು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ, ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್ ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ ಕನ್ನಡ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ ಸಚಿವರು ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.