ಮಾಲೆ: ಮಾಲ್ಡೀವ್ಸ್ನಲ್ಲಿರುವ ಭಾರತೀಯ ಹೈಕಮಿಷನರ್ ಮುನು ಮಹಾವರ್ ಅವರು ಮಾಲ್ಡೀವ್ಸ್ ಕಸ್ಟಮ್ಸ್ ಜನರಲ್ ಯೂಸುಫ್ ಮಾನಿಯು ಮೊಹಮ್ಮದ್ ಅವರನ್ನು ಗುರುವಾರ ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆಗಳನ್ನು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚರ್ಚೆಗಳು ಸಾಮರ್ಥ್ಯ ನಿರ್ಮಾಣದ ಹೊಸ ಕ್ಷೇತ್ರಗಳ ಮೇಲೆ ಮತ್ತು ವ್ಯಾಪಾರ ಸುಗಮಗೊಳಿಸುವಿಕೆ ಮತ್ತು ಪರಸ್ಪರ ಭದ್ರತೆಯಲ್ಲಿ ಸಹಯೋಗದ ಬಗ್ಗೆ ಕೇಂದ್ರೀಕೃತವಾಗಿದ್ದವು. ಈ ವೇಳೆ ಮಾಲ್ಡೀವ್ಸ್ ಕಸ್ಟಮ್ಸ್ ಸೇವೆ (MCS) ಮತ್ತು ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (CBIC) ನಡುವಿನ ಬಹುಮುಖಿ ಸಹಯೋಗವನ್ನು ಅನ್ವೇಷಿಸಲು ಮತ್ತು ಮುಂದಕ್ಕೆ ಸಾಗಿಸಲು ಎರಡೂ ದೇಶಗಳು ಒಪ್ಪಂದಕ್ಕೆ ಬಂದವು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಇತ್ತೀಚಿನ ಲಕ್ಷದ್ವೀಪ ಭೇಟಿಯ ಬಳಿಕ ಮಾಲ್ಡೀವ್ಸ್ ಕಿರಿಯ ಮಂತ್ರಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ಗಳನ್ನು ಮಾಡಿದ ಪರಿಣಾಮ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯದಲ್ಲಿ ಉಂಟಾದ ಹಿನ್ನಡೆ ಮತ್ತು ಮಾಲ್ಡೀವ್ನಿಂದ ಭಾರತೀಯ ಸೈನ್ಯವನ್ನು ಹಿಂತೆಗೆದುಕೊಳ್ಳುವಂತೆ ಮಾಡಿದ ಮನವಿಯ ಹಿನ್ನೆಲೆಯಲ್ಲಿ ಈ ಸಭೆ ನಡೆದಿರುವುದು ಮಹತ್ವ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.