ನವದೆಹಲಿ: ಆಪಾದಿತ ಬೇಹುಗಾರಿಕೆ ಪ್ರಕರಣದಲ್ಲಿ ಒಂದು ವರ್ಷದ ಬಳಿಕ ಕತಾರ್ನಿಂದ ಬಿಡುಗಡೆಗೊಂಡ ನೌಕಾಪಡೆಯ ಮಾಜಿ ಯೋಧರು ತಮ್ಮನ್ನು ಬಿಡುಗಡೆಗೊಳಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸರಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ದೇಶಕ್ಕೆ ಮರಳಿದ ಎಂಟು ಯೋಧರಲ್ಲಿ ಏಳು ಮಂದಿ ದೆಹಲಿ ವಿಮಾನ ನಿಲ್ದಾಣದಿಂದ ‘ಭಾರತ್ ಮಾತಾ ಕೀ ಜೈ’ ಎಂದು ಘೋಷಣೆ ಕೂಗುತ್ತಾ ಹೊರನಡೆದರು.
“ನಾವು ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದೇವೆ ಎಂದು ನಮಗೆ ತುಂಬಾ ಸಂತೋಷವಾಗಿದೆ. ಖಂಡಿತವಾಗಿಯೂ, ನಾವು ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಲು ಬಯಸುತ್ತೇವೆ ಏಕೆಂದರೆ ಇದು ಅವರ ವೈಯಕ್ತಿಕ ಹಸ್ತಕ್ಷೇಪದಿಂದ ಮಾತ್ರ ಸಾಧ್ಯವಾಯಿತು” ಎಂದು ಅವರಲ್ಲಿ ಒಬ್ಬರು ಹೇಳಿದರು.
“ಪ್ರಧಾನಿ ಮೋದಿಯವರ ಹಸ್ತಕ್ಷೇಪವಿಲ್ಲದೆ ನಾವು ಇಲ್ಲಿ ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ. ಭಾರತ ಸರ್ಕಾರದ ನಿರಂತರ ಪ್ರಯತ್ನದಿಂದ ಇದು ಸಂಭವಿಸಿದೆ” ಎಂದು ಮತ್ತೊಬ್ಬರು ಹೇಳಿದರು.
“ನಾವು ಭಾರತಕ್ಕೆ ಹಿಂತಿರುಗಲು ಸುಮಾರು 18 ತಿಂಗಳುಗಳ ಕಾಲ ಕಾಯುತ್ತಿದ್ದೆವು. ನಾವು ಪ್ರಧಾನಿಗೆ ಅತ್ಯಂತ ಕೃತಜ್ಞರಾಗಿರುತ್ತೇವೆ. ಅವರ ವೈಯಕ್ತಿಕ ಹಸ್ತಕ್ಷೇಪ ಮತ್ತು ಕತಾರ್ನೊಂದಿಗಿನ ಅವರ ಒಡನಾಟವಿಲ್ಲದೆ ಇದು ಸಾಧ್ಯವಾಗುತ್ತಿರಲಿಲ್ಲ. ನಾವು ಅಂತರಾಳದಿಂದ ಭಾರತ ಸರ್ಕಾರಕ್ಕೆ ಕೃತಜ್ಞರಾಗಿರುತ್ತೇವೆ ಅವರು. ಮಾಡಿದ ಪ್ರತಿಯೊಂದು ಪ್ರಯತ್ನಕ್ಕಾಗಿ ನಮ್ಮ ಕೃತಜ್ಞತೆಗಳು ಮತ್ತು ಅವರ ಪ್ರಯತ್ನಗಳಿಲ್ಲದೆ ಈ ದಿನವನ್ನು ನಾವು ನೋಡಲು ಸಾಧ್ಯವಾಗುತ್ತಿರಲಿಲ್ಲ” ಎಂದು ಹೇಳಿದರು.
ಮಾಜಿ ಯೋಧರನ್ನು ಭಾರತಕ್ಕೆ ಮರಳಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಕತಾರ್ನ ಅಮೀರ್ಗೆ ಧನ್ಯವಾದಗಳನ್ನು ಅರ್ಪಿಸುವ ಮೂಲಕ ಕೇಂದ್ರ ಸರ್ಕಾರ ಇಂದು ಬೆಳಿಗ್ಗೆ ಮಾಜಿ ಸೈನಿಕರ ಬಿಡುಗಡೆಯನ್ನು ಘೋಷಿಸಿತು.
#WATCH | Delhi: One of the Navy veterans who returned from Qatar says, “We are very happy that we are back in India, safely. Definitely, we would like to thank PM Modi, as this was only possible because of his personal intervention…” pic.twitter.com/iICC1p7YZr
— ANI (@ANI) February 12, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.