ನವದೆಹಲಿ: ತನ್ನ ಜೈಲಿನಲ್ಲಿದ್ದ ಎಂಟು ಭಾರತೀಯರನ್ನು ಕತಾರ್ ಬಿಡುಗಡೆ ಮಾಡಿದ ದಿನ, ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಫೆಬ್ರವರಿ 14 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್ಗೆ ಭೇಟಿ ನೀಡಲಿದ್ದಾರೆ.
ಮೋದಿ ಫೆ.14 ರವರೆಗೆ ಯುಎಇಗೆ ಭೇಟಿ ನೀಡಲಿದ್ದಾರೆ, ಬಳಿಕ ಅವರು ಕತಾರ್ ರಾಜಧಾನಿ ದೋಹಾಗೆ ಪ್ರಯಾಣಿಸಲಿದ್ದಾರೆ.
ಕತಾರ್ ಜೈಲಿನಲ್ಲಿದ್ದ ಎಂಟು ಮಾಜಿ ಭಾರತೀಯ ನೌಕಾ ಸಿಬ್ಬಂದಿಯನ್ನು ಕತಾರ್ ಆಡಳಿತ ಈಗಾಗಲೇ ಬಿಡುಗಡೆ ಮಾಡಿದೆ. ಇವರಲ್ಲಿ ಏಳು ಮಂದಿ ಸೋಮವಾರ ಬೆಳಗ್ಗೆ ಭಾರತಕ್ಕೆ ಮರಳಿದ್ದಾರೆ. ಜೈಲಿನಲ್ಲಿರುವ ಭಾರತೀಯರು ತವರಿಗೆ ಹಿಂದಿರುಗುತ್ತಿದ್ದಂತೆ ಪ್ರಧಾನಿ ಮೋದಿ ಕತಾರ್ಗೆ ಭೇಟಿ ಘೋಷಣೆಯಾಗಿದೆ.
8 ಭಾರತೀಯರ ಪ್ರಕರಣದ ಬೆಳವಣಿಗೆಗಳನ್ನು ಪ್ರಧಾನಿ ಮೋದಿ ಖುದ್ದಾಗಿ ಮೇಲ್ವಿಚಾರಣೆ ಮಾಡಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಅವರು ಹೇಳಿದ್ದಾರೆ. ಭಾರತೀಯರನ್ನು ಬಿಡುಗಡೆ ಮಾಡುವ ಕತಾರ್ ನಿರ್ಧಾರದಿಂದ ನಮಗೆ ಸಂತೋಷವಾಗಿದೆ ಎಂದು ಅವರು ಹೇಳಿದರು.
ಮೋದಿ ಮತ್ತು ಕತಾರ್ನ ಎಮಿರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸಲು ವ್ಯಾಪಕ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.