ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪ್ರವಾಸಕ್ಕಾಗಿ ಭಾರತದಿಂದ ನಿರ್ಗಮಿಸಿದ್ದಾರೆ. ಇದು 2015 ರಿಂದ ಯುಎಇಗೆ ಪ್ರಧಾನಿ ಮೋದಿಯವರ ಏಳನೇ ಭೇಟಿ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಭೇಟಿಯಾಗಿದೆ.
ತಮ್ಮ ಭೇಟಿಯ ಸಮಯದಲ್ಲಿ, ಪಿಎಂ ಮೋದಿ ಅವರು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವಾದ ಬಿಎಪಿಎಸ್ ಮಂದಿರವನ್ನು ಉದ್ಘಾಟಿಸಲಿದ್ದಾರೆ ಮತ್ತು ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ನಡುವಿನ ವಿಶೇಷ ಬಾಂಧವ್ಯದಿಂದ ಉಭಯ ರಾಷ್ಟ್ರಗಳ ನಡುವೆ ಬಲವಾದ ಬಾಂಧವ್ಯ ಏರ್ಪಡುತ್ತಾ ಬರುತ್ತಿದೆ.
ಯುಎಇ ಭೇಟಿಯ ವೇಳೆ ಮೋದಿ ವಿಶ್ವ ಸರ್ಕಾರ ಶೃಂಗಸಭೆ 2024 ರಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಉಭಯ ನಾಯಕರ ನಡುವೆ ಮಹತ್ವದ ದ್ವಿಪಕ್ಷೀಯ ಸಭೆಯನ್ನು ನಿಗದಿಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.