ಧರ್ಮಶಾಲಾ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಎರಡೂವರೆ ತಿಂಗಳುಗಳ ಕಾಲ ನಡೆಯಲಿರುವ ಸುದೀರ್ಘ ಕ್ರಿಕೆಟ್ ಸರಣಿ ಇಂದಿನಿಂದ ಆರಂಭಗೊಳ್ಳಲಿದೆ. ಸರಣಿಯ ಮೊದಲ ಟಿ20 ಅ.2ರಂದು ಸಂಜೆ 7 ಗಂಟೆಯಿಂದ ಮಧ್ಯಪ್ರದೇಶದ ಧರ್ಮಶಾಲಾದಲ್ಲಿ ನಡೆಯಲಿದೆ.
ಮುಂದಿನ ವರ್ಷ ಮಾರ್ಚ್-ಎಪ್ರಿಲ್ನಲ್ಲಿ ಭಾರತದಲ್ಲಿ ನಡೆಯಲಿರುವ ವಿಶ್ವ ಟಿ20 ಕ್ರಿಕೆಟ್ ಪಂದ್ಯಾವಳಿಯ ತಯಾರಿ ನಡೆಸುವ ನಿಟ್ಟಿನಲ್ಲಿ 3 ಟಿ20 ಪಂದ್ಯಗಳ ಸರಣಿ ನಡೆಯುತ್ತಿದೆ. 2007ರಲ್ಲಿ ನಡೆದ ಮೊದಲ ವಿಶ್ವ ಟಿ20 ಪಂದ್ಯಾವಳಿಯಲ್ಲಿ ಭಾರತ ಚಾಂಪಿಯನ್ಸ್ ಆಗಿ ಹೊರಹೊಮ್ಮಿದ್ದರೆ, 2014ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ವಿಶ್ವ ಟಿ20 ಫೈನಲ್ ತಲುಪಿತ್ತು.
ಅ.2ರಿಂದ ಡಿ.7ರ ವರೆಗೆ ನಡೆಯಲಿರುವ ಈ ಸರಣಿಯು 4 ಟೆಸ್ಟ್, 3 ಟಿ೨೦ ಹಾಗೂ 5ಏಕದಿನ ಪಂದ್ಯಗಳನ್ನು ಒಳಗೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.