ನವದೆಹಲಿ: ಭಾನುವಾರ ಚಂಡೀಗಢದಲ್ಲಿ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದೆ.
ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, ರೈತ ಮುಖಂಡರ ಜತೆ ಸಕಾರಾತ್ಮಕ ಚರ್ಚೆ ನಡೆಸಿದ್ದೇವೆ. ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (ಎನ್ಸಿಸಿಎಫ್) ಮತ್ತು ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (ನಾಫೆಡ್) ನಂತಹ ಸರ್ಕಾರದಿಂದ ಉತ್ತೇಜಿತವಾಗಿರುವ ಸಹಕಾರ ಸಂಘಗಳು ಮುಂದಿನ 5 ವರ್ಷಗಳವರೆಗೆ ಒಪ್ಪಂದ ಮಾಡಿಕೊಂಡು ಉತ್ಪನ್ನಗಳನ್ನು ಖರೀದಿಸಲು ಎರಡೂ ಪಕ್ಷಗಳು ಜಂಟಿಯಾಗಿ ಪ್ರಸ್ತಾಪಿಸಿವೆ ಎಂದು ಅವರು ಹೇಳಿದರು.
ರೈತರಿಂದ ಕನಿಷ್ಠ ಬೆಂಬಲ ಬೆಲೆ (MSP) ಪ್ರಮಾಣದಲ್ಲಿ ಯಾವುದೇ ಮಿತಿ ಇರುವುದಿಲ್ಲ. ದೆಹಲಿಗೆ ಮರಳಿದ ನಂತರ ಸರ್ಕಾರವು NCCF ಮತ್ತು NAFED ನೊಂದಿಗೆ ಚರ್ಚಿಸುತ್ತದೆ ಎಂದು ಸಚಿವರು ಹೇಳಿದರು.
ಸುಮಾರು 4 ಗಂಟೆಗೂ ಹೆಚ್ಚು ಕಾಲ ಸಭೆ ನಡೆಯಿತು.
ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ ರಾಯ್ ಅವರು ಮಾತುಕತೆಯಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಹಿಂದಿನ ಮೂರು ಸುತ್ತಿನ ಸಂವಾದಗಳು ಫೆಬ್ರವರಿ 8, 12 ಮತ್ತು 15 ರಂದು ನಡೆದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.