ನವದೆಹಲಿ: ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಅಂತಿಮಗೊಳ್ಳುವವರೆಗೆ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ನಮ್ಮ ಪಕ್ಷ ಭಾಗವಹಿಸುವುದಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೋಮವಾರ ಹೇಳಿದ್ದಾರೆ.
“ಇದೀಗ ಮಾತುಕತೆ ನಡೆಯುತ್ತಿದೆ, ಅವರಿಂದ ಪಟ್ಟಿಗಳು ಬಂದಿವೆ, ನಾವು ನಮ್ಮ ಪಟ್ಟಿಯನ್ನು ಸಹ ನೀಡಿದ್ದೇವೆ. ಸೀಟು ಹಂಚಿಕೆ ಮುಗಿದ ಕ್ಷಣ, ಸಮಾಜವಾದಿ ಪಕ್ಷವು ಅವರ ನ್ಯಾಯ ಯಾತ್ರೆಗೆ ಸೇರುತ್ತದೆ” ಎಂದು ಅಖಿಲೇಶ್ ತಿಳಿಸಿದರು.
ಟಿಎಂಸಿ ವರಿಷ್ಠೆ ಮತ್ತು ಇಂಡಿ ಒಕ್ಕೂಟದ ಪ್ರಮುಖ ಸದಸ್ಯರಾಗಿದ್ದ ಸಿಎಂ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಲು ನಿರಾಕರಿಸಿದ ಬಳಿಕ ಇದೀಗ ಸಮಾಜವಾದಿ ಯಾತ್ರೆಯಲ್ಲಿ ಭಾಗವಹಿಸುತ್ತದೆಯೇ ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಮೂಡಿದೆ.
ಇದಕ್ಕೂ ಮುನ್ನ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಮೇಠಿ ಅಥವಾ ರಾಯ್ ಬರೇಲಿಯಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ಅಖಿಲೇಶ್ ಯಾದವ್ ಆಹ್ವಾನ ಸ್ವೀಕರಿಸಿದ್ದಾರೆ ಎಂದಿದ್ದರು.
ಕಾಂಗ್ರೆನ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ 37ನೇ ದಿನಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಬಾಬುಗಂಜ್ನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ ಬಳಿಕ ಇಂದು ರಾತ್ರಿ ಅಮೇಥಿಗೆ ತೆರಳುತ್ತಾರೆ ಮತ್ತು ನಾಳೆ ಬೆಳಿಗ್ಗೆ ರಾಯಬರೇಲಿ ತಲುಪಲಿದ್ದಾರೆ.
ಲೋಕಸಭೆ ಚುನಾವಣೆಗೆ ಮುನ್ನ 15 ರಾಜ್ಯಗಳ ಮೂಲಕ 6,700 ಕಿ.ಮೀ ಕ್ರಮಿಸುವ ಗುರಿಯನ್ನು ಯಾತ್ರೆ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.