ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೈಯಕ್ತಿಕ ದ್ವೇಷ ಇಟ್ಟುಕೊಂಡು ಪೊಲೀಸರ ಮೂಲಕ ವಕೀಲರ ಮೇಲೆ ಕೇಸನ್ನು ದಾಖಲು ಮಾಡುವ ಕೆಟ್ಟ ಸಂಪ್ರದಾಯದ ವಿರುದ್ಧ ರಾಮನಗರದಾದ್ಯಂತ ಇವತ್ತು ವಕೀಲರು ಸೇರಿ ಸಾರ್ವಜನಿಕರು ಪ್ರತಿಭಟನೆ ಮಾಡುತ್ತಿದ್ದಾರೆ. ರಾಮನಗರದ ಪಿಎಸ್ಐ ತನ್ವೀರ್ ಹುಸೇನ್ ಅವರು ವಿನಾಕಾರಣ ನಿರಪರಾಧಿ ವಕೀಲರ ಮೇಲೆ ಕೇಸು ಹಾಕಿದ್ದಾರೆ. ಇದು ಖಂಡನೀಯ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆರೋಪಿಗಳನ್ನು ಕೈಬಿಟ್ಟು ನಿರಪರಾಧಿಗಳ ಮೇಲೆ ಕೇಸು ಹಾಕುವ ಈ ಕೆಟ್ಟ ಸಂಪ್ರದಾಯಕ್ಕೆ ಕಾರಣರಾದ ಅಲ್ಲಿನ ಪಿಎಸ್ಐಯನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ದೇವಸ್ಥಾನಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣದಲ್ಲಿ ಬಂದ ಟೀಕೆ ಬಗ್ಗೆ ದೂರು ನೀಡಲಾಗಿದೆ. ತಪ್ಪು ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ಬಿಟ್ಟು ಆರೋಪಿಗಳಿಂದಲೇ ದೂರು ಸ್ವೀಕರಿಸಿ 40 ಜನ ವಕೀಲರ ಮೇಲೆ ಕೇಸು ದಾಖಲಿಸಲಾಗಿದೆ. ಅದರಲ್ಲೂ ಕೂಡ ವಿಪಕ್ಷದಲ್ಲಿ ಕೆಲಸ ಮಾಡುವ ವಕೀಲರನ್ನು ಹುಡುಕಿ ಅವರ ಮೇಲೆ ಕೇಸು ದಾಖಲಿಸಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಪೊಲೀಸರ ಮೂಲಕ ವೈಯಕ್ತಿಕ ದ್ವೇಷ ಸಾಧನೆ, ವಿಪಕ್ಷಗಳ ಮೇಲೆ ದ್ವೇಷ ಸಾಧನೆಗೆ ಬಳಸಿಕೊಳ್ಳಲಾಗಿದೆ. ಅಂಥ ಪೊಲೀಸ್ ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕು ಎಂದು ಅವರು ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ಆಗ್ರಹಿಸಿದರು. ಈ ಕುರಿತು ಸದನದಲ್ಲೂ ಗಮನ ಸೆಳೆದುದಾಗಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.