ನವದೆಹಲಿ: ಇಂದು ನಡೆದ ಚುನಾವಣೆಯಲ್ಲಿ ಗುಜರಾತ್ನ ಎಲ್ಲಾ ನಾಲ್ಕು ರಾಜ್ಯಸಭಾ ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ. ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರೀತಾ ಮೆಹ್ತಾ ಘೋಷಿಸಿದ್ದಾರೆ. ಬಿಜೆಪಿಯಿಂದ ಗೆದ್ದ ಇತರ ಮೂವರು ವಜ್ರದ ಉದ್ಯಮಿ ಗೋವಿಂದಭಾಯಿ ಧೋಲಾಕಿಯಾ, ಪಕ್ಷದ ನಾಯಕರಾದ ಜಸ್ವಂತಸಿಂಗ್ ಪರ್ಮಾರ್ ಮತ್ತು ಮಯಾಂಕ್ ನಾಯಕ್.
ರಾಜ್ಯದಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಅವರು ನಾಮಪತ್ರ ಸಲ್ಲಿಸಿದ್ದು, ಅವರ ವಿರುದ್ಧ ಬೇರೆ ಅಭ್ಯರ್ಥಿಗಳು ಸ್ಪರ್ಧಿಸಿರಲಿಲ್ಲ. ನಾಮಪತ್ರ ಹಿಂಪಡೆಯಲು ಮಂಗಳವಾರ ಕೊನೆಯ ದಿನವಾಗಿತ್ತು. ಗುಜರಾತ್ ಅಸೆಂಬ್ಲಿಯಲ್ಲಿ 182 ಸ್ಥಾನಗಳಲ್ಲಿ 111 ಸ್ಥಾನಗಳನ್ನು ಬಿಜೆಪಿ ಹೊಂದಿದ್ದರೆ, ಕಾಂಗ್ರೆಸ್ 65 ಅನ್ನು ಹೊಂದಿದೆ.
ಮಂಗಳವಾರ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಮೂವರು ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದ್ದಾರೆ. ಉಳಿದ ಇಬ್ಬರು ಬಿಜೆಪಿಯ ಚುನ್ನಿಲಾಲ್ ಗರಾಸಿಯಾ ಮತ್ತು ಮದನ್ ರಾಥೋಡ್ ಎಂದು ವಿಧಾನಸಭೆ ಕಾರ್ಯದರ್ಶಿ ಮಹಾವೀರ್ ಪ್ರಸಾದ್ ಶರ್ಮಾ ತಿಳಿಸಿದ್ದಾರೆ.
ರಾಜ್ಯಸಭಾ ಸದಸ್ಯರಾದ ಮನಮೋಹನ್ ಸಿಂಗ್ (ಕಾಂಗ್ರೆಸ್) ಮತ್ತು ಭೂಪೇಂದ್ರ ಯಾದವ್ (ಬಿಜೆಪಿ) ಅವರ ಅವಧಿ ಏಪ್ರಿಲ್ 3 ರಂದು ಕೊನೆಗೊಳ್ಳುತ್ತಿರುವ ಕಾರಣ ರಾಜ್ಯದಲ್ಲಿ ಮೂರು ಸ್ಥಾನಗಳಿಗೆ ಚುನಾವಣೆ ನಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.