ಡೆಹ್ರಾಡೂನ್: ಪ್ರಮುಖ ಬೆಳವಣಿಗೆಯೊಂದರಲ್ಲಿ, ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ರಾಜ್ಯದ ಕಾಂಗ್ರೆಸ್ ಪಕ್ಷದೊಳಗಿನ ಶಾಸಕರ ಅಸಮಾಧಾನದ ನಡುವೆ ಬುಧವಾರ ರಾಜೀನಾಮೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಈ ವರದಿಯನ್ನು ಸ್ವತಃ ಸುಖು ನಿರಾಕರಿಸಿದ್ದಾರೆ.
ಹಿಮಾಚಲಪ್ರದೇಶದ ಕಾಂಗ್ರೆಸ್ ನೇತೃತ್ವದ ಸರ್ಕಾರ ಸದ್ಯಕ್ಕೆ ತೀವ್ರ ಸ್ವರೂಪದ ಬಿಕ್ಕಟ್ಟು ಎದುರಿಸುತ್ತಿದೆ. ಅಲ್ಲಿನ ಒಂದೇ ರಾಜ್ಯಸಭಾ ಸ್ಥಾನಕ್ಕೆ ನಿನ್ನೆ ನಡೆದ ಚುನಾವಣೆಯಲ್ಲಿ ಸರ್ಕಾರ ವಿಶ್ವಸ ಕಳೆದುಕೊಂಡಿದೆ ಎಂಬುದು ಸಾಬೀತಾದ ಹಿನ್ನೆಲೆಯಲ್ಲಿ ಮತ್ತು ಅದರ ನಂತರ ನಡೆದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ಘೋಷಿಸುತ್ತಾರೆ ಎಂದು ಹೇಳಲಾಗಿತ್ತು.
ನಾನೊಬ್ಬ ಹೋರಾಟಗಾರ ಮತ್ತು ಹೋರಾಡುತ್ತೇನೆ, ಓಡಿ ಹೋಗುವುದಿಲ್ಲ ಎಂದು ಸುಖು ಹೇಳಿದ್ದಾರೆ. ಸಿಎಂ ಸುಖು ರಾಜೀನಾಮೆಗೆ ಆಗ್ರಹಿಸಿ ಹಲವಾರು ಕಾಂಗ್ರೆಸ್ ಶಾಸಕರು ಬಂಡಾಯವೆದ್ದಿರುವ ಹಿನ್ನೆಲೆಯಲ್ಲಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಹಿಮಾಚಲದಲ್ಲಿ ತಮ್ಮ ಸರ್ಕಾರವನ್ನು ಉಳಿಸುವ ಸಲುವಾಗಿ ಸಿಎಂ ಸುಖು ಅವರನ್ನು ಕೆಳಗಿಳಿಸುವಂತೆ ಕಾಂಗ್ರೆಸ್ ವರಿಷ್ಠರು ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
68 ಸದಸ್ಯ ಬಲದ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಪಕ್ಷ ಕಾಂಗ್ರೆಸ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.