ನವದೆಹಲಿ: ಜಮಾತ್-ಎ-ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರದ ಮೇಲಿನ ನಿಷೇಧವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ ಮತ್ತು ಅದನ್ನು ‘ಕಾನೂನುಬಾಹಿರ ಸಂಘಟನೆ’ ಎಂದು ಎಂದು ಕೇಂದ್ರ ಸರ್ಕಾರ ಮತ್ತೊಮ್ಮೆ ಘೋಷಿಸಿದೆ.
ನಿಷೇಧವನ್ನು ವಿಸ್ತರಿಸಿದ ಗೃಹ ಸಚಿವ ಅಮಿತ್ ಶಾ, ರಾಷ್ಟ್ರದ ಭದ್ರತೆಗೆ ಯಾರಾದರೂ ಬೆದರಿಕೆ ಹಾಕಿದರೆ ನಿರ್ದಯ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು. ಜಮಾತ್-ಎ-ಇಸ್ಲಾಮಿ ಜೆ-ಕೆ ರಾಷ್ಟ್ರದ ಭದ್ರತೆ, ಸಮಗ್ರತೆ ಮತ್ತು ಸಾರ್ವಭೌಮತ್ವದ ವಿರುದ್ಧ ತನ್ನ ಚಟುವಟಿಕೆಗಳನ್ನು ಮುಂದುವರೆಸಿದೆ ಎಂದು ಅವರು ಹೇಳಿದರು.
“ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದದ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಶೂನ್ಯ ಸಹಿಷ್ಣುತೆಯ ನೀತಿಯನ್ನು ಅನುಸರಿಸಿ ಸರ್ಕಾರವು ಜಮಾತ್-ಎ-ಇಸ್ಲಾಮಿ ಜಮ್ಮು ಕಾಶ್ಮೀರದ ಮೇಲಿನ ನಿಷೇಧವನ್ನು ಐದು ವರ್ಷಗಳವರೆಗೆ ವಿಸ್ತರಿಸಿದೆ” ಎಂದು ಅವರು ಎಕ್ಸ್ನಲ್ಲಿ ಬರೆದಿದ್ದಾರೆ.
ಈ ಭಯೋತ್ಪಾದಕ ಸಂಘಟನೆಯ ವಿರುದ್ಧ ದಾಖಲಾದ 47 ಪ್ರಕರಣಗಳ ಪಟ್ಟಿಯನ್ನು ನೀಡಿದ ಕೇಂದ್ರವು, ಜಮಾತ್-ಎ-ಇಸ್ಲಾಮಿ ಜೆ & ಕೆ ಉಗ್ರಗಾಮಿ ಸಂಘಟನೆಗಳೊಂದಿಗೆ ನಿಕಟ ಸಂಪರ್ಕದಲ್ಲಿದೆ ಮತ್ತು ಜಮ್ಮು ಮತ್ತು ಕಾಶ್ಮೀರ ಮತ್ತು ದೇಶದ ಇತರೆಡೆಗಳಲ್ಲಿ ಉಗ್ರವಾದ ಮತ್ತು ಭಯವನ್ನು ನಿರಂತರವಾಗಿ ಬೆಂಬಲಿಸುತ್ತಿದೆ ಎಂದು ಹೇಳಿದೆ.
Pursuing PM @narendramodi Ji's policy of zero tolerance against terrorism and separatism the government has extended the ban on Jamaat-e-Islami, Jammu Kashmir for five years. The organisation is found continuing its activities against the security, integrity and sovereignty of…
— Amit Shah (@AmitShah) February 27, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.