ಬೆಂಗಳೂರು: ಅಂಗಡಿ, ಮಳಿಗೆಗಳಲ್ಲಿ ಶೇ.60ರಷ್ಟು ಕನ್ನಡ ಫಲಕಗಳನ್ನು ಕಡ್ಡಾಯವಾಗಿ ಹಾಕಲು ನೀಡಿದ್ದ ಗಡುವನ್ನು ಕರ್ನಾಟಕ ಸರ್ಕಾರ ಇನ್ನೂ ಎರಡು ವಾರಗಳವರೆಗೆ ವಿಸ್ತರಣೆ ಮಾಡಿದೆ. ನಗರದ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನಿಗದಿ ಪಡಿಸಿದ್ದ ಗಡುವನ್ನು ವಿಸ್ತರಿಸಲಾಗಿದೆ.
ಈ ಕುರಿತು ಎಕ್ಸ್ ಪೋಸ್ಟ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ , ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕೇವಲ 3 ಸಾವಿರ ಉದ್ದಿಮೆದಾರರು ಮಾತ್ರ 60% ನಿಯಮ ಪಾಲಿಸಬೇಕಿದೆ. ಬೆಂಗಳೂರಿನಲ್ಲಿ 55,178 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. 60% ಕನ್ನಡ ನಿಯಮ ಉಲ್ಲಂಘನೆ ಮಾಡಿರುವ 55,178 ಉದ್ದಿಮೆದಾರರಿಗೆ ನೋಟಿಸ್ ಹೋಗಿದೆ.
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ…
— DK Shivakumar (@DKShivakumar) February 29, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.