ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತ ಓಲೈಕೆ ಇದೀಗ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಚಾಮರಾಜಪೇಟೆಯಲ್ಲಿ ಪಶುಸಂಗೋಪನಾ ಇಲಾಖೆಯ 2 ಎಕರೆ ಜಮೀನನ್ನು ಅಲ್ಪಸಂಖ್ಯಾತರಿಗೆ ನೀಡಿದ ಸರ್ಕಾರದ ನಡೆ ಭಾರೀ ವಿವಾದವನ್ನು ಸೃಷ್ಟಿಸಿದೆ.
ಈಗಾಗಲೇ ಬೆಂಗಳೂರಿನಲ್ಲಿ ರಾಜ್ಯ ವಕ್ಫ್ ಬೋರ್ಡ್ನ ನೂರಾರು ಎಕರೆ ಜಮೀನುಇದೆ. ಆದರೂ ಪಶುಸಂಗೋಪನಾ ಇಲಾಖೆಯ ಜಮೀನನ್ನು ಅಲ್ಪಸಂಖ್ಯಾತರಿಗೆ ನೀಡಿರುವ ಸರ್ಕಾರದ ನಡೆ ಸಹಜವಾಗಿಯೇ ಆಕ್ರೋಶಕ್ಕೆ ಕಾರಣವಾಗಿದೆ.
ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿರುವ ಶಾಸಕ ಸುನೀಲ್ ಕುಮಾರ್ ಅವರು, “ಗೋಹತ್ಯೆ ನಿಷೇಧ ಕಾಯಿದೆಯನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿಕೆ ನೀಡಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದ ಪಶು ಸಂಗೋಪನಾ ಸಚಿವರು, ಪಶುಚಿಕಿತ್ಸಾಲಯದ ಜಾಗವನ್ನು ಮುಸಲ್ಮಾನರ ಶ್ರೇಯೋಭಿವೃದ್ಧಿಗೆ ದಾನ ಮಾಡಿದ್ದಾರೆ” ಎಂದಿದ್ದಾರೆ.
ಪಶುಸಂಗೋಪನೆ ಇಲಾಖೆಯ ಜಮೀನಿನಲ್ಲಿ ಅಲ್ಪಸಂಖ್ಯಾತ ಇಲಾಖೆಯ ಶಾಲೆ ನಿರ್ಮಾಣ ಮಾಡುವುದ ನೀಡುವುದು ಖಂಡನೀಯವಾಗಿದೆ. ಇದು ಒಂದು ರೀತಿಯ ಲ್ಯಾಂಡ್ ಜಿಹಾದ್ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಗೋಹತ್ಯೆ ನಿಷೇಧ ಕಾಯಿದೆಯನ್ನು ರದ್ದುಗೊಳಿಸುತ್ತೇವೆ ಎಂದು ಹೇಳಿಕೆ ನೀಡಿ ಹಿಂದುಗಳ ಭಾವನೆಗೆ ಧಕ್ಕೆ ತಂದಿದ್ದ ಪಶು ಸಂಗೋಪನಾ ಸಚಿವರು, ಪಶುಚಿಕಿತ್ಸಾಲಯದ ಜಾಗವನ್ನು ಮುಸಲ್ಮಾನರ ಶ್ರೇಯೋಭಿವೃದ್ಧಿಗೆ ದಾನ ಮಾಡಿದ್ದಾರೆ.
ಜಾಗ ಕೇಳಿದ ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಗೂ , (1/2) pic.twitter.com/MnF651ogcW— Sunil Kumar Karkala (@karkalasunil) February 29, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.