ಬೆಂಗಳೂರು: ಬೆಂಗಳೂರಿನ ಪ್ರಸಿದ್ಧ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ದಿಢೀರ್ ಸ್ಫೋಟ ಸಂಭವಿಸಿದ ಪರಿಣಾಮ ಕೆಫೆಯಲ್ಲಿ ಗೊಂದಲ ಉಂಟಾದ ಪರಿಣಾಮ ಗ್ರಾಹಕರು ಪ್ರಾಣ ಉಳಿಸಿಕೊಳ್ಳಲು ಚೆಲ್ಲಾಪಿಲ್ಲಿಯಾಗಿ ಓಡಿಹೋದರು. ಆದರೆ ಈ ಘಟನೆಗೆ ಕಾರಣ ಮಾತ್ರ ಇನ್ನೂ ನಿಗೂಢವಾಗಿದೆ. ಸಿಲಿಂಡರ್ ಸ್ಪೋಟದಿಂದ ಹೀಗಾಗಿರಬಹುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ, ಆದರೆ ಗ್ರಾಹಕರು ಬಿಟ್ಟು ಹೋದ ಬ್ಯಾಗ್ನಲ್ಲಿ ಸ್ಪೋಟ ಸಂಭವಿಸಿದ ಎಂದು ಕೆಫೆ ಮಾಲೀಕರು ಹೇಳುತ್ತಿದ್ದಾರೆ.
ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರು, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ದೌಡಾಯಿಸಿದೆ. ಕೆಫೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ವೈಟ್ಫೀಲ್ಡ್ ಅಗ್ನಿಶಾಮಕ ಠಾಣೆ, ರಾಮೇಶ್ವರಂ ಕೆಫೆಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದು ನಮಗೆ ಕರೆ ಬಂದಿತು, ನಾವು ಸ್ಥಳಕ್ಕೆ ತಲುಪಿದ್ದೇವೆ ಮತ್ತು ನಾವು ಪರಿಸ್ಥಿತಿಯನ್ನು ವಿಶ್ಲೇಷಿಸುತ್ತಿದ್ದೇವೆ ಎಂದಿದ್ದಾರೆ.
Just spoke to Rameshwaram Café founder Sri Nagaraj about the blast in his restaurant.
He informed me that the blast occurred because of a bag that was left by a customer and not any cylinder explosion. One of their employees is injured.
It’s seems to be a clear case of bomb…
— Tejasvi Surya (@Tejasvi_Surya) March 1, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.