ಬೆಂಗಳೂರು: ದೇಶ ಮೊದಲು ಚಿಂತನೆಯಡಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ ಯುವ ಮೋರ್ಚಾ ಕಾರ್ಯಕರ್ತರು ತಂದ ಒಂದು ಸಾವಿರ ಅಡಿಯ ರಾಷ್ಟ್ರಧ್ವಜವನ್ನು ಕಸಿದುಕೊಂಡು ತುರ್ತು ಪರಿಸ್ಥಿತಿ ಹೇರಿದಂತೆ ವರ್ತಿಸಿದ್ದಾರೆ ಎಂದು ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು ಅವರು ಆಕ್ಷೇಪಿಸಿದರು.
ಬಿಜೆಪಿ, ದೇಶ ಮೊದಲು ಎಂಬ ಸಿದ್ಧಾಂತ ಹೊಂದಿದೆ ಎಂದ ಅವರು, ಬಸ್ಸಿನಲ್ಲಿ ಕಾರ್ಯಕರ್ತರನ್ನು ತುಂಬಿಸಿ ಒಯ್ದಿದ್ದಾರೆ. ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ತಿರಂಗಾ ಯಾತ್ರೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು ಖಂಡನೀಯ ಎಂದು ಹೇಳಿದರು. ಪ್ರಜಾಪ್ರಭುತ್ವದ ದೇವಾಲಯ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುತ್ತಾರೆ. ಬಳಿಕ ಬಾಂಬ್ ಸ್ಫೋಟವೂ ಆಗಿದೆ ಎಂದು ಅವರು ವಿವರಿಸಿದರು.
ಈ ದೌರ್ಜನ್ಯ ಅತ್ಯಂತ ಖಂಡನಾರ್ಹ ಎಂದು ಅವರು ಆಕ್ಷೇಪ ಸೂಚಿಸಿದರು. ಬಿಜೆಪಿ ಯುವ ಮೋರ್ಚಾ ಕರ್ನಾಟಕದ ವತಿಯಿಂದ ಇಂದು ಸಂಜೆ ಬೆಂಗಳೂರಿನ “ಟೌನ್ ಹಾಲ್”ನಿಂದ ತಿರಂಗಾ ಯಾತ್ರೆ ನಡೆಯಬೇಕಿತ್ತು. ಆದರೆ, ಯುವ ಮೋರ್ಚಾ ಕಾರ್ಯಕರ್ತರು ರಾಷ್ಟ್ರಧ್ವಜವನ್ನು ಬಿಡಿಸಲು ಅವಕಾಶ ಕೊಡದೆ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ತೀವ್ರವಾಗಿ ಖಂಡಿಸಲಾಯಿತು.
ದೇಶ ಮೊದಲು ಎಂಬ ಜಾಗೃತಿ ಮೂಡಿಸುವ ಉದ್ದೇಶ ನಮ್ಮದಾಗಿತ್ತು. ನಾವು ಯಾರಿಗೂ ತೊಂದರೆ ಮಾಡಿಲ್ಲ. ಆದರೂ ಪೊಲೀಸರು ದೌರ್ಜನ್ಯ ಮಾಡಿದ್ದಾರೆ ಎಂದು ಟೀಕಿಸಿದರು. ಪಾಕಿಸ್ತಾನ ಜಿಂದಾಬಾದ್ ಕೂಗಿದವರನ್ನು ಕೂಡಲೇ ಬಂಧಿಸಿ; ಇಲ್ಲವಾದರೆ ಸರಕಾರ ರಾಜೀನಾಮೆ ಕೊಡಬೇಕು ಎಂದು ಅವರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಧೀರಜ್ ಮುನಿರಾಜು, ಶಾಸಕ ಕೆ.ಸಿ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಮತ್ತು ಪಕ್ಷದ ಮುಖಂಡರು, ಯುವಮೋರ್ಚಾ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.