ಬೆಂಗಳೂರು: ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಾಳೆ (ಮಾರ್ಚ್ 5) ರಾಜ್ಯದಾದ್ಯಂತ ನಾರಿಶಕ್ತಿ ಯಾತ್ರಾ ನಡೆಸಲಾಗುವುದು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಕೂಟಿ, ಬೈಕ್, ಸೈಕಲ್ ಯಾತ್ರೆಗಳು ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಸಿ. ಮಂಜುಳಾ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ದೇಶಾದಾದ್ಯಂತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 4ರಿಂದ 6 ರವರೆಗೆ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಅವರು ವಿವರಿಸಿದರು.
ಮೂರು ದಿನ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಇಂದು ನಗರ ಪ್ರದೇಶದ ಸ್ವ ಸಹಾಯ ಸಂಘಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಸಂಜೀವಿನಿ ಒಕ್ಕೂಟದ ಮಹಿಳೆಯರು ಹಾಗೂ ಮಹಿಳಾ ಸಂಘಟನೆಗಳು, ರಾಜಕೀಯೇತರ ಸಂಸ್ಥೆಗಳು ಇವತ್ತಿನ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದರು.
ಪಶ್ಚಿಮ ಬಂಗಾಲದ ಸಂದೇಶ್ಖಾಲಿ ಎಂಬಲ್ಲಿ ಗರಿಷ್ಠ ಮಹಿಳಾ ದೌರ್ಜನ್ಯ ನಡೆಯುತ್ತಿದೆ. ಇದೇ 6 ರಂದು ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯಗಳು, ಅನಾಚಾರಗಳು ಹಾಗೂ ಮಹಿಳೆಯರ ಮೇಲೆ ನಡೆದಂತಹ ಘನ ಘೋರ ಆಕ್ರಮಣವನ್ನು ಖಂಡಿಸಲಾಗುವುದು. ಶಹಜಹಾನ್ ಎಂಬ ಒಬ್ಬ ಪುಂಡನ ಬೆಂಬಲಕ್ಕೆ ಮಮತಾ ಬ್ಯಾನರ್ಜಿ ಸರ್ಕಾರ ನಿಂತಿದೆ. ಇದರÀ ವಿರುದ್ಧ ಹಾಗೂ ನಮ್ಮ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ನಿರಂತರವಾಗಿ ನಿರ್ಲಕ್ಷ್ಯ ವಹಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಮಂಜುಳಾ ಅವರು ತಿಳಿಸಿದರು.
ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾವು ಸಂದೇಶ್ಖಾಲಿಯಲ್ಲಿ ಒಂದು ಲಕ್ಷ ಮಹಿಳೆಯರ ಸಭೆಯನ್ನು ಆಯೋಜಿಸಲಿದೆ. ಈ ಕಾರ್ಯಕ್ರಮದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿಜೀ ಅವರು ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ದೇಶದ ಎಲ್ಲಾ ಮಂಡಲಗಳಲ್ಲಿ ಹಾಗೂ ಕರ್ನಾಟಕದ 312 ಸಂಘಟನಾತ್ಮಕ ಮಂಡಲಗಳಲ್ಲಿ ಎಲ್ಇಡಿ ಪರದೆ ಅಳವಡಿಸಿ ಪ್ರಧಾನಿಯವರ ಭಾಷಣವನ್ನು ನೇರ ಪ್ರಸಾರ ಮಾಡಲಾಗುತ್ತದೆ. ಇದನ್ನು ನಾವೆಲ್ಲರೂ ಕೇಳಲಿದ್ದೇವೆ. ನಂತರ 12ಕ್ಕೆ ಮಹಿಳಾ ಸಮಾವೇಶ ನಡೆಯಲಿವೆ ಎಂದು ತಿಳಿಸಿದರು.
ಇಂದು ರಾಜ್ಯದ 28 ಜಿಲ್ಲೆಗಳಲ್ಲಿ ಬೆಳಗ್ಗೆ ‘ರನ್ ಫಾರ್ ನೇಶನ್, ರನ್ ಫಾರ್ ಮೋದಿ’ ಕಾರ್ಯಕ್ರಮ ನಡೆದಿದ್ದು, ಇನ್ನು ನಾಲ್ಕು ಜಿಲ್ಲೆಗಳಲ್ಲಿ ಸಂಜೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು. ಎರಡು ತಿಂಗಳಿನಿಂದ ಬಿಜೆಪಿ ಮಹಿಳಾ ಮೋರ್ಚಾ ಅಭಿಯಾನ, ನಾರಿಶಕ್ತಿ ವಂದನ್ ಕಾರ್ಯಕ್ರಮಗಳ ಕುರಿತು ಮಾಹಿತಿಯನ್ನು ಹಂಚಿಕೊಂಡರು. ಕಡಬದಲ್ಲಿ ಇಂದು ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮವನ್ನು ತೆಗೆದುಕೊಳ್ಳಲು ಅವರು ಆಗ್ರಹಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.