ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಸೋಮವಾರ ಬಂಧನಕ್ಕೆ ಒಳಪಡಿಸಲಾಗಿದೆ. ಮೂಲಗಳ ಪ್ರಕಾರ, ಎಫ್ಎಸ್ಎಲ್ ವರದಿಯಲ್ಲಿ ಪಾಕಿಸ್ಥಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೃಢವಾದ ಹಿನ್ನೆಲೆಯಲ್ಲೇ ಬಂಧನವಾಗಿದೆ ಎನ್ನಲಾಗಿದೆ.
ಆದರೆ ಕಾಂಗ್ರೆಸ್ ಸರ್ಕಾರ ಇದುವರೆಗೆ ಎಫ್ಎಸ್ಎಲ್ ವರದಿಯನ್ನು ಸಾರ್ವಜನಿಕರ ಮುಂದೆ ಇಟ್ಟಿಲ್ಲ.
ಮೂವರ ಬಂಧನವಾದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ತನ್ನ ವಾಗ್ಯುದ್ಧವನ್ನು ತೀವ್ರಗೊಳಿಸಿದ್ದು, ತಕ್ಷಣದಲ್ಲೇ ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಅವರ ರಾಜೀನಾಮೆ ಪಡೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ್ ತೋಡೋ ಯಾತ್ರೆಯಲ್ಲಿ ಬಿಝಿಯಾಗಿರುವ ನಡುವಲ್ಲೇ ಬೆಂಗಳೂರಿನ ವಿಧಾನಸೌಧದ ಒಳಗೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ್ದಕ್ಕಾಗಿ ರಾಹುಲ್ ಅವರ ಆಪ್ತರನ್ನು ಬೆಂಗಳೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಈ ರಾಷ್ಟ್ರ ವಿರೋಧಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು. UAPA ಅಡಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದೆ.
ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಸಂಸದ ನಸೀರ್ ಅವರಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದೆ. ಪಾಕಿಸ್ತಾನದ ಡಿಎನ್ಎಯನ್ನು ಹಂಚಿಕೊಳ್ಳುವ ಕಾಂಗ್ರೆಸ್, ತನ್ನ ನಿಷ್ಠೆ ಎಲ್ಲಿದೆ ಎಂಬುದನ್ನು ಮತ್ತೊಮ್ಮೆ ತೋರಿಸಿದೆ ಎಂದು ಟೀಕಿಸಿದೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.