ನವದೆಹಲಿ: ಭಾರತೀಯ ಚುನಾವಣಾ ಆಯೋಗ ಇಂದು ಪತ್ರಿಕಾಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದೆ
ದೇಶದಲ್ಲಿ ಒಟ್ಟು 97 ಕೋಟಿ ನೋಂದಾಯಿತ ಮತದಾರರು ಇದ್ದಾರೆ ಎಂದು ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ ಒಟ್ಟು 97 ಕೋಟಿ ನೋಂದಾಯಿತ ಮತದಾರರು ಇದ್ದಾರೆ. ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿ 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರು ಇದ್ದಾರೆ ಎಂದು ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮಹಿಳಾ ಮತದಾರರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿ 1000 ಪುರುಷ ಮತದಾರರಿಗೆ 948 ಮಹಿಳಾ ಮತದಾರರು ಇದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ. ಒಟ್ಟು 55 ಲಕ್ಷ ಇವಿಎಂ ಗಳ ಬಳಕೆ ಮಾಡಲಾಗುವುದು, 85 ವರ್ಷ ಮೇಲ್ಪಟ್ಟ 82 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ, 12 ರಾಜ್ಯಗಳಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚು ಇದೆ. 48000 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಇದ್ದಾರೆ. ವಯೋವೃದ್ಧ ಮತದಾರರನ್ನು ಮತಗಟ್ಟೆಗೆ ಕರೆ ತರಲು ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುವುದು ಮತಗಟ್ಟೆಗಳಲ್ಲಿ ಮಾಹಿತಿ ಕೇಂದ್ರ ಗಾಲಿ ಕುರ್ಚಿ ಕುಡಿಯುವ ನೀರು ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.
80 ವರ್ಷ ಮೇಲ್ಪಟ್ಟ ಮತದಾರರಿಗೆ ಮತಗಟ್ಟೆಗೆ ಬರಲು ವಾಹನ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೇ ಅಭ್ಯರ್ಥಿಗಳು ತಮ್ಮ ಮೇಲಿನ ಕ್ರಿಮಿನಲ್ ಕೇಸ್ ಗಳನ್ನು ಆಯೋಗಕ್ಕೆ ನೀಡುವುದು ಕಡ್ಡಾಯ ಎಂದಿದ್ದಾರೆ
ದೇಶದಲ್ಲಿ ಒಟ್ಟು 2.18 ಲಕ್ಷ ಶತಾಯುಷಿಗಳು ಮತ ಚಲಾಯಿಸಲಿದ್ದಾರೆ. 1.8 ಕೋಟಿ ಮೊದಲ ಬಾರಿಯ ಮತದಾರರು ಇದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.