ನವದೆಹಲಿ: ಉಕ್ರೇನ್ನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಅವರು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಎರಡು ವರ್ಷಗಳ ಹಿಂದೆ ರಷ್ಯಾದ ಆಕ್ರಮಣದ ನಂತರ ಉನ್ನತ ಉಕ್ರೇನಿಯನ್ ನಾಯಕರ ಮೊದಲ ಭಾರತ ಭೇಟಿ ಇದಾಗಿದೆ.
ರಷ್ಯಾದೊಂದಿಗೆ ಸಾಂಪ್ರದಾಯಿಕವಾಗಿ ನಿಕಟ ಆರ್ಥಿಕ ಮತ್ತು ರಕ್ಷಣಾ ಸಂಬಂಧಗಳನ್ನು ಹೊಂದಿರುವ ಭಾರತ, ಫೆಬ್ರವರಿ 2022 ರಂದು ಉಕ್ರೇನ್ ಮೇಲಿನ ಆಕ್ರಮಣಕ್ಕಾಗಿ ರಷ್ಯಾವನ್ನು ಟೀಕಿಸಲು ನಿರಾಕರಿಸಿತ್ತು, ಬದಲಿಗೆ ರಷ್ಯಾದಿಂದ ತೈಲದ ಖರೀದಿಯನ್ನು ದಾಖಲೆ ಮಟ್ಟಕ್ಕೆ ಏರಿಸಿತು. ಇಂತಹ ಸನ್ನಿವೇಶದಲ್ಲಿ ಕುಲೆಬಾ ಅವರ ಭಾರತ ಭೇಟಿ ಕುತೂಹಲ ಕೆರಳಿಸಿದೆ.
ಈ ವರ್ಷದ ಆರಂಭದಲ್ಲಿ ಉಭಯ ರಾಷ್ಟ್ರಗಳ ನಾಯಕರ ನಡುವೆ ದೂರವಾಣಿ ಸಂಭಾಷಣೆ ನಡೆದಿದೆ. ಭಾರತದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಂ ಜೈಶಂಕರ್ ಅವರ ಆಹ್ವಾನದ ಮೇರೆಗೆ ಕುಲೇಬಾ ಅವರ ಭೇಟಿ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ
ಮುಂದಿನ ವಾರ ಭೇಟಿಯ ಅಧಿಕೃತ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತದಲ್ಲಿ ಜನವರಿಯಲ್ಲಿ ನಡೆಯಲಿರುವ ವ್ಯಾಪಾರ ಶೃಂಗಸಭೆಯಲ್ಲಿ ಭಾರತೀಯ ಕಂಪನಿಗಳಿಂದ ಹೂಡಿಕೆಯನ್ನು ಆಹ್ವಾನಿಸುವ ಮೂಲಕ ತನ್ನ ಯುದ್ಧದಿಂದ ಪೀಡಿತಗೊಂಡ ಆರ್ಥಿಕತೆಯನ್ನು ಮರುನಿರ್ಮಾಣ ಮಾಡಲು ಉಕ್ರೇನ್ ಭಾರತದ ಬೆಂಬಲದ ನಿರೀಕ್ಷೆಯಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.