ನವದೆಹಲಿ: ಚುನಾವಣೆಗೆ ಕೆಲವೇ ವಾರಗಳು ಇರುವಂತೆ ಮಹತ್ವದ ಆದೇಶ ನೀಡಿರುವ ಸುಪ್ರೀಂಕೋರ್ಟ್, ಚುನಾವಣಾ ಆಯುಕ್ತರನ್ನು ನೇಮಿಸುವ ಕಾನೂನಿಗೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ ಮತ್ತು ಈ ಹಂತದಲ್ಲಿ ಹಾಗೆ ಮಾಡುವುದರಿಂದ ಅವ್ಯವಸ್ಥೆ ಸೃಷ್ಟಿಯಾಗುತ್ತದೆ ಎಂದು ಹೇಳಿದೆ.
ಗುರುವಾರದ ವಿಚಾರಣೆಯ ಸಂದರ್ಭದಲ್ಲಿ ಅವಲೋಕನಗಳನ್ನು ಮಾಡುವಾಗ, ಹೊಸ ಕಾನೂನಿನಡಿಯಲ್ಲಿ ಆಯ್ಕೆ ಸಮಿತಿಯಲ್ಲಿ ಬದಲಾವಣೆಗಳನ್ನು ಮಾಡಿದ ನಂತರ ಆಯ್ಕೆಯಾದ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠ, “ಚುನಾವಣಾ ಆಯೋಗವು ಆಡಳಿತದ ಅಡಿಯಲಲಿದೆ ಎಂದು ನೀವು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದೆ.
ಕೇಂದ್ರ ಜಾರಿಗೆ ತಂದಿರುವ ಕಾನೂನು ತಪ್ಪು ಎಂದು ಭಾವಿಸಲಾಗದು ಎಂದು ಅರ್ಜಿದಾರರತ್ತ ಬೆಟ್ಟು ಮಾಡಿದ ಪೀಠ, ‘ನೇಮಕಗೊಂಡಿರುವವರ ವಿರುದ್ಧ ಯಾವುದೇ ಆರೋಪಗಳಿಲ್ಲ ಎಂದಿದೆ.
ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರು (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅನ್ನು ಕಳೆದ ವರ್ಷ ಸಂಸತ್ತು ಅಂಗೀಕರಿಸಿತು ಮತ್ತು ನಂತರ ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.