ನವದೆಹಲಿ: ಈ ವರ್ಷದ ಆರಂಭದಲ್ಲಿ ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಜನ್ಮಭೂಮಿ ದೇವಾಲಯದಲ್ಲಿ ಸ್ಥಾಪಿಸಲಾದ ರಾಮಲಲಾ ವಿಗ್ರಹವನ್ನು ಕೆತ್ತಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ರಾಮಲಲ್ಲಾನ ಚಿಕ್ಕ ಮೂರ್ತಿಯನ್ನು ರಚಿಸಿದ್ದು, ಅದರ ಚಿತ್ರಗಳನ್ನು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಹಂಚಿಕೊಂಡಿದ್ದಾರೆ.
“ರಾಮ ಲಲಾನ ಮುಖ್ಯ ಮೂರ್ತಿಯ ಆಯ್ಕೆಯ ನಂತರ, ನಾನು ಅಯೋಧ್ಯೆಯಲ್ಲಿ ನನ್ನ ಬಿಡುವಿನ ವೇಳೆಯಲ್ಲಿ ಮತ್ತೊಂದು ಸಣ್ಣ ರಾಮ ಲಲ್ಲಾ ಮೂರ್ತಿಯನ್ನು ಕೆತ್ತಿದ್ದೇನೆ” ಎಂದು ಅವರು X ನಲ್ಲಿ ಚಿತ್ರಗಳನ್ನು ಹಂಚಿಕೊಂಡು ಒಕ್ಕಣೆ ಬರೆದಿದ್ದಾರೆ.
ದೇಶದ ಅತ್ಯಂತ ಬೇಡಿಕೆಯ ಶಿಲ್ಪಿಗಳಲ್ಲಿ ಒಬ್ಬರಾದ ಮೈಸೂರಿನ ಅರುಣ್ ಯೋಗಿರಾಜ್ ಅವರು ಕುಶಲತೆಯ ಶ್ರೀಮಂತ ಪರಂಪರೆಯನ್ನು ಹೊಂದಿರುವ ಕುಟುಂಬದಿಂದ ಬಂದವರು. ಅವರ ತಂದೆ ಮತ್ತು ಅಜ್ಜ ಪ್ರಸಿದ್ಧ ಶಿಲ್ಪಿಗಳಾಗಿದ್ದರು. MBA ಮುಗಿಸಿದ ನಂತರ, ಯೋಗಿರಾಜ್ ಸ್ವಲ್ಪ ಕಾಲ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದರು ಆದರೆ ತಮ್ಮ ಪೂರ್ವಜರ ಪರಂಪರೆಯನ್ನು ಅನುಸರಿಸಲು ಬಯಸಿ 2008 ರಿಂದ, ಅವರು ಪ್ರತಿಮೆಗಳನ್ನು ರಚಿಸುತ್ತಿದ್ದಾರೆ, ರಾಷ್ಟ್ರವ್ಯಾಪಿ ಮನ್ನಣೆಯನ್ನು ಗಳಿಸಿದ್ದಾರೆ.
After the selection of the main Murti of Ram lalla, I carved another small Ram lalla murti (Stone) in my free time at Ayodhya. pic.twitter.com/KBO0rgXVPq
— Arun Yogiraj (@yogiraj_arun) March 23, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.