ಮಲಪ್ಪುರಂ: ‘ಭಾರತ್ ಮಾತಾ ಕೀ ಜೈ’ ಮತ್ತು ‘ಜೈ ಹಿಂದ್’ ಎಂಬ ಸಾಂಪ್ರದಾಯಿಕ ರಾಷ್ಟ್ರೀಯತೆಯ ಘೋಷಣೆಗಳನ್ನು ಮುಸ್ಲಿಮರು ರಚಿಸಿದ್ದಾರೆ ಎಂದು ಹೇಳುವ ಮೂಲಕ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.
ಮುಸ್ಲಿಂ ಬಾಹುಳ್ಯವಿರುವ ಮಲಪ್ಪುರಂ ಜಿಲ್ಲೆಯಲ್ಲಿ ಸೋಮವಾರ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ ಮಾತನಾಡಿದ ವಿಜಯನ್, ಭಾರತದ ಇತಿಹಾಸ ಮತ್ತು ಸ್ವಾತಂತ್ರ್ಯ ಚಳವಳಿಯಲ್ಲಿ ಮುಸ್ಲಿಮರ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದಿದ್ದಾರೆ.
“ಕೆಲವು ಕಾರ್ಯಕ್ರಮಗಳಲ್ಲಿ, ಕೆಲವು ಸಂಘಪರಿವಾರದ ನಾಯಕರು ‘ಭಾರತ್ ಮಾತಾ ಕಿ ಜೈ’ ಎಂದು ಕೂಗುವುದನ್ನು ನಾವು ಕೇಳುತ್ತೇವೆ. ಭಾರತ್ ಮಾತಾ ಕಿ ಜೈ ಎಂಬ ಘೋಷಣೆಯನ್ನು ಯಾರು ರೂಪಿಸಿದರು? ಇದು ಸಂಘ ಪರಿವಾರಕ್ಕೆ ತಿಳಿದಿದೆಯೇ ಎಂದು ನನಗೆ ತಿಳಿದಿಲ್ಲ. ಘೋಷಣೆ ರಚಿಸಿದವರ ಹೆಸರು ಅಜೀಮುಲ್ಲಾ ಖಾನ್. ಅವರು ಸಂಘಪರಿವಾರದ ನಾಯಕರಲ್ಲ. ಒಂದು ವೇಳೆ ಮುಸಲ್ಮಾನರೇ ಈ ಘೋಷಣೆಯನ್ನು ರಚಿಸಿದ್ದಾರೆ ಎಂಬ ಕಾರಣಕ್ಕೆ ಸಂಘಪರಿವಾರವು ಈ ಘೋಷಣೆಯನ್ನು ಮಾಡದಿರಲು ನಿರ್ಧರಿಸುತ್ತಾರೆಯೇ?” ಎಂದಿದ್ದಾರೆ.
ಮುಸ್ಲಿಮರು ಭಾರತವನ್ನು ತೊರೆಯಬೇಕು, ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಹೇಳುವ ಸಂಘಪರಿವಾರದವರು ಈ ಇತಿಹಾಸವನ್ನು ಅರ್ಥಮಾಡಿಕೊಳ್ಳಬೇಕು ಎಂದು ನಾನು ಹೇಳಲು ಬಯಸುತ್ತೇನೆ ಎಂದಿದ್ದಾರೆ.
ಪಿನರಾಯಿ ಹೇಳಿಕೆ ಹೊಸ ವಿವಾದವನ್ನು ಹುಟ್ಟುಹಾಕಿದ್ದು, ಭಾರೀ ಆಕ್ರೋಶಕ್ಕೂ ಕಾರಣವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.