ಹರಿದ್ವಾರ: ಪತಂಜಲಿಯ ಯೋಗ ಗುರು ಬಾಬಾ ರಾಮ್ದೇವ್ ಮತ್ತು ಅವರ ಸಹಾಯಕ ಆಚಾರ್ಯ ಬಾಲಕೃಷ್ಣ ಅವರು ಹರಿದ್ವಾರ ರೈಲ್ವೆ ನಿಲ್ದಾಣದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಪತಂಜಲಿ ಯೋಗಪೀಠವು ರೈಲ್ವೆ ನಿಲ್ದಾಣವನ್ನು ಸ್ವಚ್ಛಗೊಳಿಸಿ, ಅದರ ಆವರಣದಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಮೂಲಕ ಒಂದು ಮಾದರಿ ರೈಲ್ವೆ ನಿಲ್ದಾಣವಾಗಿ ಪರಿವರ್ತಿಸಲಿದೆ ಎಂದು ಘೋಷಿಸಿದೆ.
ಭಾರತವನ್ನು ಸ್ವಚ್ಛ ಹಾಗೂ ಸುಂದರ ರಾಷ್ಟ್ರವಾಗಿ ನಿರ್ಮಿಸುವಲ್ಲಿ ಮಹಾತ್ಮಾ ಗಾಂಧಿಯವರ ದೃಷ್ಟಿಕೋನ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಅಭಿಯಾನದ ಉದ್ದೇಶ ಇವೆರಡೂ ದೇಶದ ಪ್ರತಿಷ್ಠೆಯನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ರಾಮ್ದೇವ್ ಹೇಳಿದ್ದಾರೆ.
ರೈಲ್ವೆ ನಿಲ್ದಾಣದ ಸ್ವಚ್ಛತಾಕಾರ್ಯ ಈಗಾಗಲೇ ಆರಂಭಗೊಂಡಿದೆ. ದೇಶದ 600 ಜಿಲ್ಲೆಗಳಲ್ಲಿಯ ಪತಂಜಲಿಯ ಲಕ್ಷಾಂತರ ಕಾರ್ಯಕರ್ತರು ಮುಂದಿನ ಒಂದು ವರ್ಷ ಕಾಲ ಪ್ರತಿನಿತ್ಯ ಹಲವು ಗಂಟೆಗಳಂತೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸ್ವಚ್ಛತೆಯ ಬದುಕು ಆರೋಗ್ಯಕರ ಜೀವನದ ಪ್ರಮುಖ ಅಂಶವಾಗಿದೆ ಎಂದು ಆಚಾರ್ಯ ಬಾಲಕೃಷ್ಣ ಹೇಳಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.