ಬೆಂಗಳೂರು: ಬಿಜೆಪಿ ಕೇಂದ್ರ ಸಮಿತಿಯು ರಾಜ್ಯಕ್ಕೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ನೀಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ಅವರು ತಿಳಿಸಿದರು.
ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ.ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಟ್ಟಿಯಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ ಮೊದಲಾದವರು ಇದ್ದಾರೆ ಎಂದು ತಿಳಿಸಿದರು.
ಪ್ರಮುಖರಾದ ಬಿ.ಎಸ್.ಯಡಿಯೂರಪ್ಪ, ಎ.ನಾರಾಯಣಸ್ವಾಮಿ, ಆರ್.ಅಶೋಕ್, ಅಣ್ಣಾಮಲೈ, ಡಾ.ರಾಧಾಮೋಹನ್ದಾಸ್ ಅಗರವಾಲ್, ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾ ಶರ್ಮ, ಡಾ. ಪ್ರಮೋದ್ ಸಾವಂತ್, ದೇವೇಂದ್ರ ಪಡ್ನವೀಸ್, ಬಸವರಾಜ ಬೊಮ್ಮಾಯಿ, ಸುಧಾಕರ ರೆಡ್ಡಿ, ಸದಾನಂದ ಗೌಡ, ಜಗದೀಶ ಶೆಟ್ಟರ್, ಸಿ.ಟಿ.ರವಿ, ನಳಿನ್ಕುಮಾರ್ ಕಟೀಲ್, ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ಸುನೀಲ್ ಕುಮಾರ್, ರಾಜೇಶ್ ಜಿವಿ, ಪಿ.ರಾಜೀವ್, ಪ್ರೀತಂ ಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಬೈರತಿ ಬಸವರಾಜು, ಪ್ರಮೋದ್ ಮಧ್ವರಾಜ್, ಛಲವಾದಿ ನಾರಾಯಣಸ್ವಾಮಿ, ಪ್ರತಾಪಸಿಂಹ, ಎನ್. ಮಹೇಶ್ ಅವರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿದ್ದಾರೆ ಎಂದು ವಿವರ ನೀಡಿದರು.
ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಸಾಮಾಜಿಕ ಜಾಲತಾಣ ರಾಜ್ಯ ಸಂಚಾಲಕ ಪ್ರಶಾಂತ್ ಮಾಕನೂರು, ರಾಜ್ಯ ವಕ್ತಾರರಾದ ಮೋಹನ್ ವಿಶ್ವ, ಕು. ಸುರಭಿ ಹೊದಿಗೆರೆ ಅವರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.