ನವದೆಹಲಿ: ಕಚ್ಚತೀವು ದ್ವೀಪ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರು ಡಿಎಂಕೆಯನ್ನು ಟೀಕಿಸಿದ್ದಾರೆ ಮತ್ತು ತಮಿಳುನಾಡಿನ ಹಿತಾಸಕ್ತಿಗಳನ್ನು ಕಾಪಾಡಲು ಪಕ್ಷವು ಏನನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ, ಕಚ್ಚತೀವು ವಿಷಯದ ಕುರಿತು ಹೊರಹೊಮ್ಮುತ್ತಿರುವ ಹೊಸ ವಿವರಗಳು ಡಿಎಂಕೆಯ ದ್ವಂದ್ವ ನೀತಿಯನ್ನು ಸಂಪೂರ್ಣವಾಗಿ ಬಿಚ್ಚಿಟ್ಟಿವೆ ಎಂದು ಮೋದಿ ಆರೋಪಿಸಿದ್ದಾರೆ.
1974 ರಲ್ಲಿ ಭಾರತ ಮತ್ತು ಶ್ರೀಲಂಕಾ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು, ಅದರ ಅಡಿಯಲ್ಲಿ ಕಚ್ಚತೀವು ದ್ವೀಪವನ್ನು ಅಂದಿನ ಕಾಂಗ್ರೆಸ್ ಸರ್ಕಾರವು ಶ್ರೀಲಂಕಾಕ್ಕೆ ನೀಡಿತು.
ಈ ವಿಷಯದ ಬಗ್ಗೆ ಅಂದಿನ ರಾಜ್ಯದ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರನ್ನು ಅಂದಿನ ಪ್ರಧಾನಿ ಇಂದಿರಾಗಾಂಧಿ ವಿಶ್ವಾಸಕ್ಕೆ ತೆಗೆದುಕೊಂಡಿದ್ದರು ಮತ್ತು ಡಿಎಂಕೆ ಒಪ್ಪಂದದ ವಿರುದ್ಧ ಸಾರ್ವಜನಿಕ ನಿಲುವು ವ್ಯಕ್ತಪಡಿಸಿದ ಹೊರತಾಗಿಯೂ ಒಪ್ಪಂದಕ್ಕೆ ಒಪ್ಪಿಗೆ ನೀಡಿತ್ತಯ ಎಂದು ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಪ್ರಧಾನಿ ಮೋದಿ ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಡಿಎಂಕೆಯ ಕುಟುಂಬ ರಾಜಕಾರಣದಡಿ ಅವರು ತಮ್ಮ ಸ್ವಂತ ಪುತ್ರ ಮತ್ತು ಪುತ್ರಿಯರು ಬೆಳೆಯಲು ಮಾತ್ರ ಕಾಳಜಿ ವಹಿಸುತ್ತಾರೆ ಎಂದು ಆರೋಪಿಸಿದ ಮೋದಿ, ಕಚ್ಚತೀವು ಮೇಲಿನ ಈ ಪಕ್ಷಗಳ ನಿರ್ದಾಕ್ಷಿಣ್ಯತೆಯು ವಿಶೇಷವಾಗಿ ಬಡ ಮೀನುಗಾರರು ಮತ್ತು ಮೀನುಗಾರ ಮಹಿಳೆಯರ ಹಿತಾಸಕ್ತಿಗಳಿಗೆ ಧಕ್ಕೆ ತಂದಿದೆ ಎಂದು ಅವರು ಹೇಳಿದರು.
ಇಂದು ಬೆಳಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವ ಡಾ.ಜೈಶಂಕರ್, ತಮಿಳುನಾಡಿನ ಆಡಳಿತಾರೂಢ ಪಕ್ಷವು ಕಚ್ಚತೀವುವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವುದನ್ನು ಪ್ರಶ್ನಿಸಿತ್ತು ಮತ್ತು ಆ ಸಮಯದಲ್ಲಿ ತಮಿಳುನಾಡು ಸರ್ಕಾರವನ್ನು ಕೇಂದ್ರ ಸಂಪರ್ಕಿಸಿಲ್ಲ ಎಂದು ಹೇಳಿತ್ತಯ. ಆದರೆ ಬಳಿಕ ಅದು ಒಪ್ಪಂದಕ್ಕೆ ಸಮ್ಮತಿ ನೀಡಿತು ಎಂದಿದ್ದಾರೆ.
Rhetoric aside, DMK has done NOTHING to safeguard Tamil Nadu’s interests. New details emerging on #Katchatheevu have UNMASKED the DMK’s double standards totally.
Congress and DMK are family units. They only care that their own sons and daughters rise. They don’t care for anyone…
— Narendra Modi (@narendramodi) April 1, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.