ಬೆಂಗಳೂರು: ಮಂಡ್ಯದ ಸಂಸದೆ ಸುಮಲತಾ ಅವರು ಇಂದು ಬಿಜೆಪಿ ಸೇರ್ಪಡೆಯಾಗುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಈ ಬಾರಿ ಚುನಾವಣೆಯಲ್ಲಿ ಮಂಡ್ಯದಿಂದ ಸ್ವತಂತ್ರವಾಗಿ ಸ್ಪರ್ಧಿಸಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಜೆಡಿಎಸ್ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿಗೆ ಅವರು ಬೆಂಬಲ ನೀಡಿದ್ದಾರೆ.
“ನನಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಹಠ ಇಲ್ಲ. ಗೌರವ ನೀಡದ ಕಾಂಗ್ರೆಸ್ ಪಕ್ಷಕ್ಕೆ ಎಂದಿಗೂ ಹೋಗುವಿದಲ್ಲ, ಅಭಿವೃದ್ಧಿ ಪಥದಲ್ಲಿ ದೇಶವನ್ನು ಮುನ್ನಡೆಸುತ್ತಿರುವ ಬಿಜೆಪಿಗೆ ನನ್ನ ಬೆಂಬಲ. ಅಭಿವೃದ್ಧುಯೇ ಮೂಲಮಂತ್ರ ಎಂದು ದೇಶವನ್ನು ಮುನ್ನಡೆಸುತ್ತಿರುವ ಮೋದಿ ನನಗೆ ಸ್ಪೂರ್ತೀ” ಎಂದು ಸುಮಲತಾ ಹೇಳಿದ್ದಾರೆ.
ಮಂಡ್ಯದಲ್ಲಿ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, 2019ರಲ್ಲಿ ಇದ್ದ ಸವಾಲುಗಳು ಮತ್ತು ಗೊಂದಲಕ್ಕಿಂತ ಹೆಚ್ಚಿನ ಸವಾಲುಗಳು ಹಾಗೂ ಗೊಂದಲಗಳು ಈಗ ಇವೆ. ಬಿಜೆಪಿಯವರು ನನ್ನ ಬೆಂಬಲ ಕೇಳಿದ್ದರು, ಅದಕ್ಕಾಗಿ 2023ರ ವಿಧಾನಸಭಾ ಚುನಾವಣೆಯಲ್ಲಿ ನಾನು ಬಿಜೆಪಿಗೆ ಬೆಂಬಲ ನೀಡಿದ್ದೆ. ಆದರೆ, ಈಗ ಅವರು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಹೇಳಿದರು.
ನಾನು ಕೊನೆಯ ಗಳಿಗೆಯವರೆಗೂ ಬಿಜೆಪಿ ಮಂಡ್ಯವನ್ನು ಉಳಿಸಿಕೊಳ್ಳಲಿ ಎಂದು ಹೋರಾಟ ಮಾಡಿದ್ದೇನೆ. ಬೆಂಗಳೂರು ಉತ್ತರ, ಮೈಸೂರು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಆಯ್ಕೆಯನ್ನು ನನ್ನ ಮುಂದೆ ಇಟ್ಟರು. ಆದರೆ, ನಾನು ಎಲ್ಲಿಗೂ ಹೋಗಲ್ಲ. ನಾನು ಗೆದ್ದರೂ ಮಂಡ್ಯ, ಸೋತರೂ ಮಂಡ್ಯನೇ ಎಂದು ಹೇಳಿದ್ದೆ. ನಾನು ಸ್ವಾರ್ಥ ರಾಜಕಾರಣವನ್ನು ಕಲಿತಿಲ್ಲ. ಅಂಬರೀಶ್ ಅವರು ಕೂಡ ಯಾವುದಕ್ಕೂ ಆಸೆ ಪಟ್ಟಿಲ್ಲ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.