ಬೆಂಗಳೂರು: ಇಂದು ಲೋಕಸಭೆಯ ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಅನೇಕರು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಇಂದು ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ಜಯನಗರ 4ನೇ ಬ್ಲಾಕಿನ ಮಯ್ಯಾಸ್ ಹೋಟೆಲ್ನಿಂದ ರೋಡ್ ಶೋ ಮೂಲಕ ಹೊರಟು ಬಿಬಿಎಂಪಿ ಜಂಟಿ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಕೂಡ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತಿತರ ಮುಖಂಡರು ಹಾಜರಿದ್ದರು.
ಇಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಗಳಾದ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗಾಂಧಿ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.