ಬೆಂಗಳೂರು: ರಾಮನವಮಿಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಮೂವರು ಯುವಕರ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿರುವ ಘಟನೆ ಭಾರೀ ಆಕ್ರೋಶವನ್ನು ಹುಟ್ಟು ಹಾಕಿದೆ. ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದೆ.
ಕಾರಿನಲ್ಲಿ ಕೇಸರಿ ಧ್ವಜ ಕಟ್ಟಿಕೊಂಡು ಜೈ ಶ್ರೀರಾಮ್ ಘೋಷಣೆ ಕೂಗುತ್ತಾ ಸಂಚರಿಸುತ್ತಿದ್ದವರನ್ನು ಏಕಾಏಕಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಲಾಗಿದೆ. ಜೈಶ್ರೀರಾಮ್ ಅನ್ನುವ ಹಾಗಿಲ್ಲ ಕೇವಲ ಅಲ್ಲಾಹು ಅಕ್ಬರ್ ಎನ್ನಬೇಕು ಎಂದು ಬೆದರಿಕೆಯನ್ನೂ ಹಾಕಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬುಧವಾರ ತಡರಾತ್ರಿ ಬೆಂಗಳೂರಿನ ಎಂಎಸ್ ಪಾಳ್ಯದಲ್ಲಿರುವ ಸಂತ್ರಸ್ತರಾದ ವಿನಾಯಕ್, ರಾಹುಲ್ ಮತ್ತು ಪವನ್ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಮತ್ತು ಘಟನೆಗೆ ಸಂಬಂಧಿಸಿದಂತೆ ವಿವರವನ್ನು ಪಡೆದುಕೊಂಡಿದ್ದಾರೆ.
‘ನಾವು ಘಟನೆಯನ್ನು ಖಂಡಿಸುತ್ತೇವೆ. ದೇಶಾದ್ಯಂತ ರಾಮ ನವಮಿ ಹಬ್ಬವನ್ನು ಆಚರಿಸಲಾಗುತ್ತಿದೆ. ಹೀಗಾಗಿ, ನಮ್ಮ ಯುವಕರು ವಿವಿಧ ರೀತಿಯಲ್ಲಿ ಹಬ್ಬವನ್ನು ಆಚರಿಸುತ್ತಾರೆ. ಅವರು ಪೂಜೆ ಮಾಡುತ್ತಾರೆ ಮತ್ತು ಮೆರವಣಿಗೆ ಮಾಡುತ್ತಾರೆ ಮತ್ತು ಅವರು ಸ್ವಾಭಾವಿಕವಾಗಿ ಕೇಸರಿ ಧ್ವಜಗಳನ್ನು ಹಿಡಿದುಕೊಳ್ಳುತ್ತಾರೆ. ಈ ವೇಳೆ ಅವರು ಪ್ರಚೋದನಕಾರಿ ಘೋಷಣೆಗಳನ್ನು ಕೂಗಿಲ್ಲ’ ಎಂದು ಹೇಳಿದರು.
ಐದರಿಂದ ಆರು ಜನರ ಗುಂಪು ದಾಳಿ ನಡೆಸಿದೆ ಎಂದು ಸಂತ್ರಸ್ತರು ಹೇಳುತ್ತಿದ್ದಾರೆ. ಅವರೆಲ್ಲರನ್ನೂ ಬಂಧಿಸುವಂತೆ ನಾನು ಪೊಲೀಸರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.
ವರದಿಗಳ ಪ್ರಕಾರ, ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.