ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮವೆಸಗಿದ ಆರೋಪಕ್ಕೆ ತುತ್ತಾಗಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತೊಂದು ಗಂಭೀರ ಆರೋಪ ಮಾಡಿದೆ. ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ದೇಹದ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಉದ್ದೇಶಪೂರ್ವಕವಾಗಿಯೇ ಹೆಚ್ಚಿನ ಸಕ್ಕರೆ ಆಹಾರವನ್ನು ಸೇವಿಸುತ್ತಿದ್ದಾರೆ ಎಂದು ಆರೋಪಿಸಿದೆ.
“ಮಧುಮೇಹಿಯಾಗಿರುವ ಅರವಿಂದ್ ಕೇಜ್ರಿವಾಲ್ ಉದ್ದೇಶಪೂರ್ವಕವಾಗಿ ಮಾವಿನಹಣ್ಣು, ಸಿಹಿತಿಂಡಿಗಳನ್ನು ತಿನ್ನುತ್ತಿದ್ದಾರೆ ಮತ್ತು ಅವರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸಲು ಚಹಾದೊಂದಿಗೆ ಸಕ್ಕರೆಯನ್ನ ಹೆಚ್ಚು ಹೆಚ್ಚು ತೆಗೆದುಕೊಳ್ಳುತ್ತಿದ್ದಾರೆ” ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.
ರಕ್ತದಲ್ಲಿನ ಸಕ್ಕರೆಯ ಮಟ್ಟದಲ್ಲಿನ ಏರಿಳಿತಗಳನ್ನು ಉಲ್ಲೇಖಿಸಿ ಕೇಜ್ರಿವಾಲ್ ಜಾಮೀನು ಪಡೆಯಲು ಒಂದು ಉದ್ದೇಶವನ್ನು ಸೃಷ್ಟಿಸಲು ಕೇಜ್ರಿವಾಲ್ ಬಯಸುತ್ತಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ
ವರದಿಗಳ ಪ್ರಕಾರ, ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಮುಂದೆ ತಮ್ಮ ವೈದ್ಯರೊಂದಿಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮತ್ತು ಸಮಾಲೋಚನೆಗಾಗಿ ದೆಹಲಿ ಸಿಎಂ ಮನವಿ ಮಾಡಿದ ಹಿನ್ನೆಲೆಯಲ್ಲಿ ಇಡಿ ಪ್ರತಿಕ್ರಿಯೆ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.