ನವದೆಹಲಿ: ಮೊದಲ ಹಂತದಲ್ಲಿ 21 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಸ್ಥಾನಗಳಲ್ಲಿ 102 ಕ್ಷೇತ್ರಗಳಿಗೆ ಮತದಾನ ನಡೆಯುವ ಮೂಲಕ ಇಂದು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಆರಂಭಗೊಂಡಿದೆ. ಈ ಸಂದರ್ಭದಲ್ಲಿ ಮಾತನಾಡಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರು, ಗೆಲುವು ಈ ಬಾರಿಯೂ ಎನ್ಡಿಎಯದ್ದೇ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮೀಸಲಾತಿಯನ್ನು ಹಿಂಪಡೆಯುತ್ತದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿರುವ ಅಮಿತ್ ಶಾ, ಬಿಜೆಪಿ ಎಂದಿಗೂ ಜಾತಿ ಆಧಾರಿತ ಮೀಸಲಾತಿ ನೀತಿಯನ್ನು ಬದಲಾಯಿಸುವುದಿಲ್ಲ ಮತ್ತು ಮೀಸಲಾತಿ ವ್ಯವಸ್ಥೆಯನ್ನು ಬೇರೆಯವರಿಗೆ ಮುಟ್ಟಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಕ್ಕೆ ಸಂದರ್ಶನ ನೀಡಿದ ಅವರು, ಈ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಅತ್ಯುತ್ತಮ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ ಎಂದು ಹೇಳಿದರು.
“ತಮಿಳುನಾಡು, ತೆಲಂಗಾಣ, ಕೇರಳ, ಆಂಧ್ರ (ಪ್ರದೇಶ) ಮತ್ತು ಕರ್ನಾಟಕ, ಈ ಎಲ್ಲಾ ರಾಜ್ಯಗಳಲ್ಲಿ ನಾವು ಬಲಿಷ್ಠವಾಗಿ ಕಾರ್ಯನಿರ್ವಹಿಸುತ್ತೇವೆ. ದಕ್ಷಿಣದಲ್ಲಿ ಮೋದಿಯವರ ಜನಪ್ರಿಯತೆಯು ಮತವಾಗಿ ಪರಿವರ್ತನೆಯಾಗುವ ಹಂತವನ್ನು ತಲುಪಿರುವುದು ಇದೇ ಮೊದಲು. ಫಲಿತಾಂಶಗಳು ಉತ್ತಮವಾಗಿರಲಿದೆ ” ಎಂದು ಅಮಿತ್ ಶಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.