ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದ್ದು, ಹಿಮಾಚಲ ಪ್ರದೇಶದ ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ತೇಜೀಂದರ್ ಸಿಂಗ್ ಬಿಟ್ಟು ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಇಂದು ಬಿಜೆಪಿ ಸೇರಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಆಪ್ತರು ಎಂದು ಕರೆಯಲ್ಪಡುತ್ತಿದ್ದ ಬಿಟ್ಟು ಅವರು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರಿದರು.
ಕೇಸರಿ ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಟ್ಟು, “ಕಾಂಗ್ರೆಸ್ ಪಕ್ಷವು ಸಮಸ್ಯೆಗಳಿಂದ ಒದ್ದಾಡುತ್ತಿದೆ ಮತ್ತು ಪಂಜಾಬ್ನ ಒಳಿತಿಗಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ” ಎಂದು ಹೇಳಿದರು.
“ನಾನು ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 35 ವರ್ಷಗಳನ್ನು ಕಳೆದಿದ್ದೇನೆ ಮತ್ತು ಇಂದು ಕಾಂಗ್ರೆಸ್ ಪಕ್ಷವು ಸಮಸ್ಯೆಗಳಿಂದ ವಿಮುಖವಾಗಿದೆ ಎಂದು ನಾನು ಭಾವಿಸುತ್ತೇನೆ. ನಾನು ಯಾರ ವಿರುದ್ಧವೂ ಮಾತನಾಡಲು ಬಯಸುವುದಿಲ್ಲ. ಪಂಜಾಬ್ನ ಒಳಿತಿಗಾಗಿ ನಾನು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ” ಎಂದು ಬಿಟ್ಟು ಎಎನ್ಐಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.