ಬೆಂಗಳೂರು: ಕರ್ನಾಟಕದಲ್ಲಿ ಎಪ್ರಿಲ್ 26 ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಹೀಗಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಇಂದು ಮತದಾರರನ್ನು ಓಲೈಸಲು ಕೊನೆಯ ಪ್ರಯತ್ನ ನಡೆಸಲಿದ್ದಾರೆ.
ನಿಯಮದ ಅನ್ವಯ ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರ ಅಂತ್ಯಗೊಳ್ಳಬೇಕಿದೆ. ಈ ಇಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಅಭ್ಯರ್ಥಿಗಳು ನಾಳೆ ಮನೆ ಮನೆ ಪ್ರಚಾರ ಮಾಡಬಹುದು.
ಮೊದಲ ಹಂತದ ಮತದಾನ ಏಪ್ರಿಲ್ 26ರಂದು (ಶುಕ್ರವಾರ) 14 ಕ್ಷೇತ್ರಗಳಲ್ಲಿ ನಡೆಯಲಿದ್ದರೆ, ಎರಡನೇ ಹಂತದ ಮತದಾನ ಮೇ7ರಂದು (ಮಂಗಳವಾರ) 14 ಕ್ಷೇತ್ರಗಳಲ್ಲಿ ನಡೆಯಲಿದೆ. ದೇಶಾದ್ಯಂತ ಮತ ಎಣಿಕೆ ಒಂದೇ ದಿನ ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಬರಲಿದೆ. ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, 28 ಕ್ಷೇತ್ರಗಳ ಪೈಕಿ 25ರಲ್ಲಿ ಬಿಜೆಪಿ ಹಾಗೂ 3ರಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಕಾಂಗ್ರೆಸ್ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.