ನವದೆಹಲಿ: ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಜಾರ್ಖಾಂಡ್ನ ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಲೆಕ್ಕವಿಲ್ಲದ ನಗದನ್ನು ವಶಪಡಿಸಿಕೊಂಡಿರುವುದಾಗಿ ಹೇಳಿಕೊಂಡಿದೆ. ವಶಪಡಿಸಿಕೊಂಡ ನಗದು ಜಾರ್ಖಂಡ್ ಸಚಿವರ ಆಪ್ತರಿಗೆ ಸಂಬಂಧಿಸಿದೆ ಎನ್ನಲಾಗಿದೆ. ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ.
ಜಾರ್ಖಂಡ್ನ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಸಹಾಯಕ ಸಂಜೀವ್ ಲಾಲ್ ಅವರ ಮನೆಯಿಂದ ಅಪಾರ ಪ್ರಮಾಣದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. 20 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ ಎನ್ನಲಾಗಿದೆ. ಎಣಿಕೆ ಪ್ರಕ್ರಿಯೆಯಲ್ಲಿದೆ” ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಹಣದ ಬಂಡಲ್ಗಳ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ದಾಳಿಗಳು ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಮುಖ್ಯ ಇಂಜಿನಿಯರ್ ವೀರೇಂದ್ರ ಕೆ ರಾಮ್ ಅವರನ್ನು ಒಳಗೊಂಡ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿವೆ. ಕೆಲವು ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದ ಹಣಕಾಸಿನ ಅಕ್ರಮಗಳ ಶಂಕೆಯ ಮೇರೆಗೆ ರಾಮ್ ಅವರನ್ನು ಫೆಬ್ರವರಿ 2023 ರಲ್ಲಿ ಇಡಿ ಬಂಧಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.