ನವದೆಹಲಿ: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಎಂದು ಕರೆಸಿಕೊಳ್ಳುವ ಭಾರತದಲ್ಲಿ ಚುನಾವಣಾ ಹಬ್ಬ ನಡೆಯುತ್ತಿದೆ. ಬಹುತೇಕ ನಾಗರಿಕರು ಮತದಾನದ ತಮ್ಮ ಹಕ್ಕನ್ನು ಅತ್ಯುತ್ಸಾಹದಿಂದ ಚಲಾವಣೆ ಮಾಡುತ್ತಿದ್ದಾರೆ. ಗಣ್ಯರಿಂದ ಹಿಡಿದು ಜನಸಾಮಾನ್ಯರವರೆಗೆ ದೇಶದ ಬಗ್ಗೆ ಕಾಳಜಿ, ಅಭಿಮಾನ ಇರುವವರು ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ದೆಹಲಿಯಲ್ಲಿ ಆರನೇ ಹಂತದ ಲೋಕಸಭೆ ಚುನಾವಣೆಗೆ ಮತ ಚಲಾಯಿಸಿದರು.ಎಸ್ ಜೈಶಂಕರ್- ತಮ್ಮ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಮೊದಲ ಪುರುಷ ಮತದಾರರಾಗಿದ್ದಾರೆ. ಈ ಕಾರಣದಿಂದ ಅವರಿಗೆ ಪ್ರಮಾಣಪತ್ರವನ್ನು ಸಹ ನೀಡಲಾಗಿದೆ.
“ನನ್ನ ಬೂತ್ನಲ್ಲಿ ನಾನು ಮೊದಲ ಪುರುಷ ಮತದಾರರಾಗಿದ್ದೇನೆ” ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡ ಫೋಟೋದೊಂದಿಗೆ ಎಕ್ಸ್ ಪೋಸ್ಟ್ ಮಾಡಿದ್ದಾರೆ. ದೆಹಲಿಯ ಮತದಾರರು ಮತ್ತೊಮ್ಮೆ ಮೋದಿ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ವಿದೇಶಾಂಗ ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.
“ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಹೊರಗೆ ಬಂದು ಮತ ಚಲಾಯಿಸಬೇಕೆಂದು ನಾವು ಬಯಸುತ್ತೇವೆ. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಹೇಳಿದರು.
Cast my vote in New Delhi this morning.
Urge all voting today to turnout in record numbers and vote in this sixth phase of the elections. pic.twitter.com/FJpskspGq9
— Dr. S. Jaishankar (Modi Ka Parivar) (@DrSJaishankar) May 25, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.