ನವದೆಹಲಿ: 2022 ರಲ್ಲಿ ಕೇಂದ್ರವು ಅನಾವರಣಗೊಳಿಸಿರುವ ಅಲ್ಪಾವಧಿಯ ರಕ್ಷಣಾ ನೇಮಕಾತಿ ಯೋಜನೆ ಅಗ್ನಿಪಥ್ ಯೋಜನೆಯ ಬಗ್ಗೆ ತಪ್ಪು ಕಲ್ಪನೆಯನ್ನು ಹರಡಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಆರೋಪಿಸಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಆರೋಪಿಸಿರುವ ಶಾ, 4 ವರ್ಷಗಳ ನಂತರ ಶೇ.75ರಷ್ಟು ಅಗ್ನಿವೀರರು ಭವಿಷ್ಯವಿಲ್ಲದೆ ಉಳಿಯುತ್ತಾರೆ ಮತ್ತು ಅವರ ಜೀವನ ನಾಶವಾಗುತ್ತದೆ ಎಂಬ ತಪ್ಪು ಕಲ್ಪನೆಯನ್ನು ದೇಶದಾದ್ಯಂತ ಹರಡಲಾಗುತ್ತಿದೆ. 100 ಜನರು ಅಗ್ನಿವೀರ್ ಆಗುತ್ತಾರೆ, ಅವರಲ್ಲಿ 25% ರಷ್ಟು ಜನರು ಸೈನ್ಯದಲ್ಲಿ ಶಾಶ್ವತವಾಗಿ ಪೋಸ್ಟ್ ಆಗುತ್ತಾರೆ ಎಂದಿದ್ದಾರೆ.
“ಉಳಿದ 75% ಕ್ಕೆ, ಬಿಜೆಪಿ ಆಡಳಿತದ ರಾಜ್ಯಗಳು ತಮ್ಮ ರಾಜ್ಯ ಪೊಲೀಸ್ ಪಡೆಗಳಲ್ಲಿ 10-20% ಮೀಸಲಾತಿಯನ್ನು ಮಾಡಿವೆ. ಕೇಂದ್ರ ಸರ್ಕಾರದ ಅರೆಸೇನಾ ಪಡೆಯಲ್ಲೂ ಶೇ.10ರಷ್ಟು ಮೀಸಲಾತಿ ನೀಡಲಾಗಿದೆ. ಮೀಸಲಾತಿಯನ್ನು ಹೊರತುಪಡಿಸಿ, ಅವರು ವಯಸ್ಸು, ಪರೀಕ್ಷೆಯಂತಹ ಆಯ್ಕೆ ಪ್ರಕ್ರಿಯೆಯಲ್ಲಿ ಸಾಕಷ್ಟು ವಿನಾಯಿತಿ ಪಡೆಯುತ್ತಾರೆ ಮತ್ತು ಅವರು ದೈಹಿಕ ಪರೀಕ್ಷೆಗಳ ಮೂಲಕ ಉದ್ಯೋಗ ಪ್ರಕ್ರಿಯೆಗೆ ಒಳಗಾಗಬೇಕಾಗಿಲ್ಲ” ಎಂದು ಶಾ ತಿಳಿಸಿದರು.
ರಾಹುಲ್ ಗಾಂಧಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಕೇಂದ್ರದ ಅಗ್ನಿಪಥ್ ಯೋಜನೆ ಬಗ್ಗೆ ತೀವ್ರ ಟೀಕೆ ಮಾಡಿದ್ದು, ಅಧಿಕಾರಕ್ಕೆ ಬಂದರೆ ಅಗ್ನಿಪಥ ಯೋಜನೆಯನ್ನು ರದ್ದುಪಡಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ತಿರುಗೇಟು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.