ನವದೆಹಲಿ: ಬೆಂಗಳೂರಿನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್) ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) 2024 ರ ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ನಿಮ್ಹಾನ್ಸ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ಪ್ರಾಮುಖ್ಯತೆಯನ್ನು ಪಡೆದ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಹತ್ತರವಾದ ಕೊಡುಗೆಗಳನ್ನು ನೀಡುತ್ತಿದೆ.
ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ನಿಮ್ಹಾನ್ಸ್ ಸಂಸ್ಥೆಯನ್ನು ಅಭಿನಂದಿಸಿದ್ದು, ಇದು ಸಮಗ್ರ ಆರೋಗ್ಯ ರಕ್ಷಣೆಯಲ್ಲಿ ಭಾರತದ ಪ್ರಯತ್ನಗಳಿಗೆ ದೊರೆತ ಮನ್ನಣೆಯಾಗಿದೆ ಎಂದು ಬಣ್ಣಿಸಿದರು. ಕೇಂದ್ರ ಆರೋಗ್ಯ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಕೂಡ ಸಂಸ್ಥೆಯನ್ನು ಅಭಿನಂದಿಸಿದರು ಮತ್ತು ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಭಾರತದ ಪ್ರಯತ್ನಗಳು ಮತ್ತು ಪ್ರವರ್ತಕ ಕೆಲಸವನ್ನು ಗುರುತಿಸಿದ್ದಕ್ಕಾಗಿ ಸಂತೋಷವನ್ನು ವ್ಯಕ್ತಪಡಿಸಿದರು.
2019 ರಲ್ಲಿ WHO ಸ್ಥಾಪಿಸಿದ ಆರೋಗ್ಯ ಪ್ರಚಾರಕ್ಕಾಗಿ ನೆಲ್ಸನ್ ಮಂಡೇಲಾ ಪ್ರಶಸ್ತಿಯನ್ನು, ಆರೋಗ್ಯ ಪ್ರಚಾರಕ್ಕೆ ಗಮನಾರ್ಹ ಕೊಡುಗೆಗಳನ್ನು ಪ್ರದರ್ಶಿಸಿದ ವ್ಯಕ್ತಿಗಳು, ಸಂಸ್ಥೆಗಳು, ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಿಗ ನೀಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.