ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಸತತ ಮೂರನೇ ಗೆಲುವು “ಜನರ ಗೆಲುವು” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಅಲ್ಲದೇ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಎನ್ಡಿಎ ಸರ್ಕಾರ ರಚಿಸುವುದು ಖಚಿತ ಎಂದು ಹೇಳಿದ್ದಾರೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಈ ಚುನಾವಣೆಯಲ್ಲಿ ಜನರು ಬಿಜೆಪಿ ಮತ್ತು ಎನ್ಡಿಎ ಮೇಲೆ ಸಂಪೂರ್ಣ ನಂಬಿಕೆ ಇಟ್ಟಿದ್ದಾರೆ. ಇದು ಭಾರತೀಯ ಸಂವಿಧಾನ ಮತ್ತು ಸಬ್ಕಾ ಸಾಥ್ ಸಬ್ಕಾ ವಿಕಾಸ್ ಮಂತ್ರದ ಮೇಲಿನ ನಂಬಿಕೆಯ ವಿಜಯವಾಗಿದೆ ಎಂದರು. ಅಲದೇ 2024 ರ ಲೋಕಸಭಾ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಿದ ಚುನಾವಣಾ ಆಯೋಗ ಮತ್ತು ಇತರರನ್ನು ಅವರು ಶ್ಲಾಘಿಸಿದರು.
ಅಧಿಕಾರದಲ್ಲಿ ಉಳಿದ 10 ವರ್ಷಗಳ ಬಳಿಕವೂ ಎನ್ಡಿಎ ಮತ್ತೆ ವಿಜಯ ಸಾಧಿಸಿರುವುದು ಐತಿಹಾಸಿಕವೇ ಆಗಿದೆ ಎಂದಿದ್ದಾರೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾತನಾಡಿ, ಎನ್ಡಿಎ ರಚನೆಯಾದ ನಂತರ, ಮೈತ್ರಿಕೂಟವು ಸತತ ಮೂರನೇ ಬಾರಿಗೆ ಸರ್ಕಾರ ರಚಿಸುತ್ತಿರುವುದು ಭಾರತೀಯ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲು. ಪ್ರತಿಪಕ್ಷಗಳು ನಕಾರಾತ್ಮಕ ಚಿಂತನೆಯೊಂದಿಗೆ ಕೆಲಸ ಮಾಡುತ್ತವೆ ಮತ್ತು ಕಳೆದ ಐದು ವರ್ಷಗಳಲ್ಲಿ ಅವರು ಯಾವುದೇ ಸಕಾರಾತ್ಮಕ ಕೊಡುಗೆ ನೀಡಿಲ್ಲ ಎಂದು ಆರೋಪಿಸಿದರು. ಬಿಜೆಪಿಯ ಹಿರಿಯ ನಾಯಕರು ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.
Speaking from @BJP4India HQ. https://t.co/x2neIsArbi
— Narendra Modi (@narendramodi) June 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.