ನವದೆಹಲಿ: ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಒಡಿಶಾ ಜನರಿಗೆ ಧನ್ಯವಾದ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ಮೋದಿ ಅವರು, ಇದು ಉತ್ತಮ ಆಡಳಿತಕ್ಕೆ ಮತ್ತು ಒಡಿಶಾದ ವಿಶಿಷ್ಟ ಸಂಸ್ಕೃತಿಯನ್ನು ಆಚರಿಸುವ ಅದ್ಭುತ ವಿಜಯವಾಗಿದೆ. ಜನರ ಕನಸುಗಳನ್ನು ನನಸು ಮಾಡುವಲ್ಲಿ ಮತ್ತು ಒಡಿಶಾವನ್ನು ಪ್ರಗತಿಯ ಹೊಸ ಎತ್ತರಕ್ಕೆ ಕೊಂಡೊಯ್ಯುವ ಯಾವುದೇ ಅವಕಾಶವನ್ನು ಬಿಜೆಪಿ ಬಿಡುವುದಿಲ್ಲ ಎಂದು ಅವರು ಹೇಳಿದರು.
ಕಷ್ಟಪಟ್ಟು ದುಡಿದ ಪಕ್ಷದ ಕಾರಯಕರ್ತರ ಪ್ರಯತ್ನಗಳಿಗಾಗಿ ನಾನು ತುಂಬಾ ಹೆಮ್ಮೆಪಡುತ್ತೇನೆ ಎಂದು ಹೇಳಿದರು.
ಎನ್ಡಿಎಗೆ ಅಸಾಧಾರಣ ಜನಾದೇಶ ನೀಡಿದ್ದಕ್ಕಾಗಿಯೂ ಆಂಧ್ರಪ್ರದೇಶದ ಜನತೆಗೆ ಮೋದಿ ಧನ್ಯವಾದ ಅರ್ಪಿಸಿದರು. ಅವರು ಎನ್ ಚಂದ್ರಬಾಬು ನಾಯ್ಡು, ಪವನ್ ಕಲ್ಯಾಣ್ ಮತ್ತು ಟಿಡಿಪಿ, ಜನಸೇನೆ ಮತ್ತು ಆಂಧ್ರಪ್ರದೇಶ ಬಿಜೆಪಿಯ ಕಾರ್ಯಕರ್ತರನ್ನು ಅಭಿನಂದಿಸಿದರು. ಆಂಧ್ರಪ್ರದೇಶದ ಸರ್ವತೋಮುಖ ಪ್ರಗತಿಗೆ ಎನ್ಡಿಎ ಕೆಲಸ ಮಾಡುತ್ತದೆ ಮತ್ತು ಮುಂದಿನ ದಿನಗಳಲ್ಲಿ ರಾಜ್ಯವು ಏಳಿಗೆಯನ್ನು ಖಚಿತಪಡಿಸುತ್ತದೆ ಎಂದು ಪ್ರಧಾನಿ ಹೇಳಿದರು.
बाबा विश्वनाथ के आशीर्वाद से काशी के सम्मानित मतदाताओं ने लगातार तीसरी बार मुझे अपना सांसद चुना है। ये काशी के लाखों मतदाताओं के विश्वास की विजय है। मेरी काशी के परिवार के हर सदस्य को इस जीत के लिए हृदय से आभार। मेरा विश्वास है कि काशी की विकास यात्रा भविष्य में और तेज गति से आगे…
— Narendra Modi (@narendramodi) June 4, 2024
Thank you Odisha! It’s a resounding victory for good governance and celebrating Odisha’s unique culture.
BJP will leave no stone unturned in fulfilling the dreams of people and taking Odisha to new heights of progress.
I am very proud of all our hardworking Party Karyakartas…
— Narendra Modi (@narendramodi) June 4, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.