ನವದೆಹಲಿ: ಬಿಜೆಪಿ, ಚುನಾವಣೋತ್ತರ ಸಮೀಕ್ಷೆಗಳು ಮತ್ತು ಸಂಶಯಾಸ್ಪದ ವಿದೇಶಿ ಹೂಡಿಕೆದಾರರ ನಡುವೆ ಸಂಬಂಧವಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಜೆಪಿ ತಿರುಗೇಟು ನೀಡಿದೆ. “ಮಾರುಕಟ್ಟೆ ಹೂಡಿಕೆದಾರರನ್ನು ದಾರಿತಪ್ಪಿಸಲು ಕಾಂಗ್ರೆಸ್ ನಾಯಕ ಪಿತೂರಿ ನಡೆಸುತ್ತಿದ್ದಾರೆ” ಎಂದು ಅದು ಆರೋಪಿಸಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಪ್ರತಿಪಕ್ಷಗಳ ಸೋಲನ್ನು ಇನ್ನೂ ಅರಗಿಸಿಕೊಳ್ಳಲಾಗುತ್ತಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಯನ್ನು ಎದುರಿಸಲು ಹಲವಾರು ವಿರೋಧ ಪಕ್ಷಗಳು ಒಗ್ಗೂಡಿ ಇಂಡಿ ಬಣವನ್ನು ರಚಿಸಿದ್ದವು. ಆದರೂ ಅವರು ಕನಸು ಈಡೇರಿಲ್ಲ ಎಂದಿದ್ದಾರೆ.
ಪ್ರಧಾನಿ ಮೋದಿಯವರ ಸರ್ಕಾರದ ಕಳೆದ 10 ವರ್ಷಗಳಲ್ಲಿ, ಭಾರತೀಯ ಷೇರುಗಳ ಮಾರುಕಟ್ಟೆ ಬಂಡವಾಳೀಕರಣವು $ 5 ಟ್ರಿಲಿಯನ್ ದಾಟಿದೆ ಎಂದು ಗೋಯಲ್ ಹೇಳಿದ್ದಾರೆ.
‘ನಕಲಿ ಎಕ್ಸಿಟ್ ಪೋಲ್’ಗಳಿಂದ ಚಿಲ್ಲರೆ ಹೂಡಿಕೆದಾರರಿಗೆ ಲಕ್ಷ ಕೋಟಿಗಳಷ್ಟು ನಷ್ಟವಾಗಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ಅತಿದೊಡ್ಡ ಷೇರು ಮಾರುಕಟ್ಟೆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆಗೆ ಆಗ್ರಹಿಸಿದ್ದರು.
ಇದಕ್ಕೆ ಪ್ರತ್ಯುತ್ತರ ನೀಡಿರುವ ಗೋಯಲ್, “ರಾಹುಲ್ ಗಾಂಧಿ ಅವರು ಲೋಕಸಭೆ ಚುನಾವಣೆಯಲ್ಲಿನ ಸೋಲನ್ನು ಇನ್ನೂ ಅರಗಿಸಿಕೊಂಡಿಲ್ಲ. ಈಗ ಅವರು ಮಾರುಕಟ್ಟೆ ಹೂಡಿಕೆದಾರರನ್ನು ದಾರಿ ತಪ್ಪಿಸುವ ಪಿತೂರಿ ಮಾಡುತ್ತಿದ್ದಾರೆ. ಇಂದು ಭಾರತ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.