ನವದೆಹಲಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧೆ ನಡೆಸುವುದಾಗಿ ಎಎಪಿ ಘೋಷಣೆ ಮಾಡಿದೆ.
ಆಮ್ ಆದ್ಮಿ ಪಕ್ಷದ ) ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರಾಯ್ ಅವರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದು, ಎಎಪಿ ಮತ್ತು ಕಾಂಗ್ರೆಸ್ ಜೊತೆಗಿನ ಮೈತ್ರಿ 2024 ರ ಲೋಕಸಭೆ ಚುನಾವಣೆಗೆ ಮಾತ್ರ ಸೀಮಿತವಾಗಿದೆ ಮತ್ತು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೆ ಇಂಡಿ ಕೂಟದ ಜೊತೆ ಎಎಪಿ ಮೈತ್ರಿ ಮಾಡಿಕೊಂಡಿತ್ತು. ಏಳು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಿಗೆ ಎಎಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ, ಉಳಿದ ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದೆ. ಆದರೆ ದೆಹಲಿಯಲ್ಲಿ ಒಂದೇ ಒಂದು ಸ್ಥಾನವನ್ನೂ ಗೆಲ್ಲಲು ವಿಫಲವಾಗಿದೆ.
“ಇಂಡಿ ಮೈತ್ರಿಕೂಟವನ್ನು ಲೋಕಸಭೆ ಚುನಾವಣೆಗಾಗಿ ರಚಿಸಲಾಗಿದೆ ಎಂಬುದು ಮೊದಲಿನಿಂದಲೂ ಸ್ಪಷ್ಟ. ನಾವು ಲೋಕಸಭೆ ಚುನಾವಣೆಯನ್ನು ಒಟ್ಟಿಗೆ ಎದುರಿಸಿದ್ದೇವೆ ಆದರೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಮೈತ್ರಿ ಇಲ್ಲ. ನಾವು ದೆಹಲಿಯ ಜನರೊಂದಿಗೆ ಒಟ್ಟಾಗಿ ವಿಧಾನಸಭಾ ಚುನಾವಣೆಯನ್ನು ಎದುರಿಸುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.