ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಇಟಲಿಯ ಬ್ರಿಂಡಿಸಿ ನಗರದಲ್ಲಿ ಬುಧವಾರ ಖಾಲಿಸ್ತಾನಿ ಪರ ಉಗ್ರರು ಧ್ವಂಸಗೊಳಿಸಿದ್ದಾರೆ. ಶುಕ್ರವಾರ ನಡೆಯಲಿರುವ ಜಿ7 ಶೃಂಗಸಭೆಯ ಔಟ್ರೀಚ್ ಸೆಷನ್ಗಳಿಗಾಗಿ ಪ್ರಧಾನಿ ಮೋದಿ ಇಟಲಿಗೆ ಭೇಟಿ ನೀಡುವ ಮುನ್ನ ಈ ಘಟನೆ ನಡೆದಿದೆ.
ಇಟಲಿಯಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿದ ವಿಷಯವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಟುವಾಗಿ ಖಂಡಿಸಿದೆ.
“ನಾವು ವರದಿಗಳನ್ನು ನೋಡಿದ್ದೇವೆ ಮತ್ತು ಅದನ್ನು ಇಟಾಲಿಯನ್ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಪ್ರಸ್ತಾಪ ಮಾಡಿದ್ದೇವೆ. ಸೂಕ್ತವಾದ ಕ್ರಮ ಜರುಗಿಸಲಾಗುತ್ತದೆ ಎಂದು ಭಾವಿಸುತ್ತೇವೆ. ಪ್ರತಿಮೆಯನ್ನು ಧ್ವಂಸಗೊಳಿಸುವ ಪ್ರಯತ್ನವು ಶೋಚನೀಯವಾಗಿದೆ” ಎಂದು ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಹೇಳಿದ್ದಾರೆ.
ಈ ಹಿಂದೆ, ಹಿರೋಷಿಮಾದಲ್ಲಿ ಜಿ7 ಮತ್ತು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಅವರು ಆಸ್ಟ್ರೇಲಿಯಾಕ್ಕೆ ಆಗಮಿಸುವ ಮುನ್ನವೇ ಖಲಿಸ್ತಾನಿ ಗೂಂಡಾಗಳು ಸಿಡ್ನಿಯ ರೋಸ್ಹಿಲ್ನಲ್ಲಿರುವ ಬಿಎಪಿಎಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಭಾರತ ವಿರೋಧಿ ಬರಹದ ಮೂಲಕ ವಿರೂಪಗೊಳಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.