ಶ್ರೀನಗರ: ಜಮ್ಮು-ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ನ ಮೇಲೆ ಜೂನ್ 9 ರಂದು ನಡೆದ ದಾಳಿಯ ತನಿಖೆಯನ್ನು ಕೇಂದ್ರವು ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ಹಸ್ತಾಂತರಿಸಿದೆ ಎಂದು ಮೂಲಗಳು ತಿಳಿಸಿವೆ
ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ ಜಮ್ಮು ಪ್ರದೇಶದಲ್ಲಿ ಭಯೋತ್ಪಾದನೆ ವಿರುದ್ಧ ಕಾಶ್ಮೀರ ಕಣಿವೆಯಲ್ಲಿ ಸಾಧಿಸಿದ ಯಶಸ್ಸನ್ನು ಪುನರಾವರ್ತಿಸಲು ಸೇನೆ, ಅರೆಸೇನಾ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳಿಗೆ ನಿರ್ದೇಶನ ನೀಡಲಾಗಿದೆ.
ರಿಯಾಸಿ ಉಗ್ರ ಕೃತ್ಯದ ಬಗ್ಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರಿಂದ ತನಿಖೆಯನ್ನು ವಹಿಸಿಕೊಂಡ ನಂತರ ಫೆಡರಲ್ ಏಜೆನ್ಸಿಯಾದ ಎನ್ಐಎ ತನ್ನದೇ ಆದ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಲಿದೆ ಎಂದು ತಿಳಿದುಬಂದಿದೆ.
ಶಿವ ಖೋರಿ ದೇವಸ್ಥಾನದಿಂದ ಕತ್ರದ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ತೆರಳುತ್ತಿದ್ದ 53 ಆಸನಗಳ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಮಕ್ಕಳು ಸೇರಿದಂತೆ ಹಲವು ಮಂದಿ ಅಸುನೀಗಿದ್ದರು.
ಬಸ್ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ದೆಹಲಿಯಿಂದ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿತ್ತು. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದು, 42 ಮಂದಿ ಗಾಯಗೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.