ಕೋಲ್ಕತ್ತಾ: ಲೋಕಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಮೇಲೆ ನಡೆದ ಹಿಂಸಾಚಾರದ ಆರೋಪದ ನಂತರ ಪರಿಸ್ಥಿತಿಯನ್ನು ಅವಲೋಕಿಸಲು ಹಿರಿಯ ನಾಯಕರಾದ ರವಿಶಂಕರ್ ಪ್ರಸಾದ್ ಮತ್ತು ಬಿಪ್ಲಬ್ ಕುಮಾರ್ ದೇಬ್ ಸೇರಿದಂತೆ ಬಿಜೆಪಿಯ ನಾಲ್ವರು ಸದಸ್ಯರ ಕೇಂದ್ರ ತಂಡ ಭಾನುವಾರ ಸಂಜೆ ಕೋಲ್ಕತ್ತಾಗೆ ಆಗಮಿಸಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೋತ್ತರ ಹಿಂಸಾಚಾರದ ನಂತರ ಬಿಜೆಪಿ ಪಕ್ಷದ ಕಾರ್ಯಕರ್ತ ಮತ್ತು ರಾಜ್ಯದ ಜನರು ಭಯಭೀತರಾಗಿದ್ದಾರೆ ಎಂದು ಪ್ರಸಾದ್ ಆರೋಪಿಸಿದ್ದಾರೆ.
ಎರಡು ದಿನಗಳ ಭೇಟಿಗಾಗಿ ನಗರಕ್ಕೆ ಆಗಮಿಸಿದ ನಂತರ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇಶದಾದ್ಯಂತ ಚುನಾವಣೆಗಳು ನಡೆದಿವೆ, ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರ ಹಿಂಸಾಚಾರ ನಡೆದಿದೆ” ಎಂದು ಹೇಳಿದರು.
“ಮಮತಾ ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಅವರು ಇದಕ್ಕೆ ಉತ್ತರಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಈಶಾನ್ಯ ರಾಜ್ಯದಲ್ಲಿ ಯಾವುದೇ ರಾಜಕೀಯ ಹಿಂಸಾಚಾರ ನಡೆದಿಲ್ಲ ಎಂದು ತ್ರಿಪುರಾದ ಮಾಜಿ ಮುಖ್ಯಮಂತ್ರಿ ದೇಬ್ ಹೇಳಿದ್ದಾರೆ. “ನಾವು ಸಂತ್ರಸ್ತರೊಂದಿಗೆ ಮಾತನಾಡುತ್ತೇವೆ ಮತ್ತು ನಮ್ಮ ಎರಡು ದಿನಗಳ ವಾಸ್ತವ್ಯದ ಸಮಯದಲ್ಲಿ ಪರಿಸ್ಥಿತಿಯನ್ನು ಪರಿಶೀಲಿಸುತ್ತೇವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.