ಬೆಂಗಳೂರು: ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯದ 19 ಎನ್ ಡಿಎ ಸಂಸದರು ಹಾಗೂ ಕೇಂದ್ರ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಇಂದು ಮಲ್ಲೇಶ್ವರ ಬಿಜೆಪಿ ರಾಜ್ಯ ಕಚೇರಿಯ ಜಗನ್ನಾಥ ಭವನದಲ್ಲಿ ವಿಶ್ವ ಯೋಗ ದಿನಾಚರಣೆ ನಿಮಿತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಸೇವೆ ಸಲ್ಲಿಸುತ್ತಿರುವ ಹಾಗೂ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕೇಂದ್ರ ಸಚಿವರನ್ನು ರಾಜ್ಯದಿಂದ ದೆಹಲಿಗೆ ತೆರಳಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು
ಈ ಕಾರ್ಯಕ್ರಮದಲ್ಲಿ ನಮ್ಮ ಎಲ್ಲಾ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಅಧಿಕಾರಿಗಳು, ಜಿಲ್ಲಾಧ್ಯಕ್ಷರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಅವರ ಪಕ್ಷದಿಂದ ಶಾಸಕರಾಗಿದ್ದರೂ ಚನ್ನಪಟ್ಟಣದಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಆದರೆ, ಜನರ ಮನದಾಳದಲ್ಲಿ ಏನಿದೆ ಎಂಬುದು ನಿಗೂಢವಾಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಲು ಅಸಾಧ್ಯ ಎಂದು ಅಲ್ಲಿನ ಕಾಂಗ್ರೆಸ್ ಅಭ್ಯರ್ಥಿ ಅಂದುಕೊಂಡಿದ್ದರು. ಆದರೆ, ಮತದಾರರ ತೀರ್ಪನ್ನು ನಾವೆಲ್ಲರೂ ನೋಡಿದ್ದೇವಲ್ಲವೇ ಎಂದರು.
ಕುಮಾರಸ್ವಾಮಿ ಅವರು ಚನ್ನಪಟ್ಟಣವನ್ನು ಕ್ಷೇತ್ರದ ಶಾಸಕರಾಗಿ ಅಭಿವೃದ್ಧಿಪಡಿಸಿದ್ದಾರೆ. ಸಂಸದರಾಗಿ ದೆಹಲಿಗೆ ಹೋಗಿದ್ದರಿಂದ ಉಪಚುನಾವಣೆ ನಡೆಯುತ್ತಿದೆ. ನಾವು ಮತ್ತು ಜೆಡಿಎಸ್ ಪಕ್ಷವು ಒಟ್ಟಾಗಿ ಚರ್ಚಿಸಿ ನಮ್ಮ ಅಭ್ಯರ್ಥಿ ಯಾರು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.