ನವದೆಹಲಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದ ಮೇಲೆ ವಿಧಿಸಿದ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ದೇಶ ಇಂದು ನನೆಪಿಸುತ್ತಿದೆ. 1975ರ ಜೂನ್ 25ರಂದು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿತ್ತು, ಇದು ಬರೋಬ್ಬರಿ 21 ತಿಂಗಳವರೆಗೆ ಮುಂದುವರೆದು ಮಾರ್ಚ್ 21, 1977 ರಂದು ಕೊನೆಗೊಂಡಿತು.
ತುರ್ತುಪರಿಸ್ಥಿತಿಯ ಈ ಕರಾಳ ಸಂದರ್ಭದಲ್ಲಿ ನಾಗರಿಕ ಹಕ್ಕುಗಳನ್ನು ಅಮಾನತುಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸಲಾಯಿತು. ಸರ್ಕಾರವನ್ನು ವಿರೋಧಿಸುವ ನಾಯಕರನ್ನು ಮಿಸಾ ಕಾನೂನಿನ ಅಡಿಯಲ್ಲಿ ಬಂಧಿಸಲಾಯಿತು. ಸಂಸದೀಯ ಮತ್ತು ಸಾಂವಿಧಾನಿಕ ಬದಲಾವಣೆಗಳನ್ನು ನಿರಂಕುಶವಾಗಿ ಮಾಡಲಾಯಿತು. ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾದ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲಾಯಿತು.
ಈ ಕರಾಳ ದಿನವನ್ನು ಸ್ಮರಿಸಿರುವ ಪ್ರಧಾನಿ ಮೋದಿಯವರು ಸರಣಿ ಎಕ್ಸ್ ಪೋಸ್ಟ್ ಮೂಲಕ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
“ಇಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ ಎಲ್ಲ ಮಹಾಪುರುಷರಿಗೆ ಮತ್ತು ಮಹಿಳೆಯರಿಗೆ ಗೌರವ ಸಲ್ಲಿಸುವ ದಿನವಾಗಿದೆ. ತುರ್ತುಪರಿಸ್ಥಿತಿಯ ಕರಾಳ ದಿನಗಳು ಕಾಂಗ್ರೆಸ್ ಪಕ್ಷವು ಮೂಲಭೂತ ಸ್ವಾತಂತ್ರ್ಯಗಳನ್ನು ಹೇಗೆ ಬುಡಮೇಲು ಮಾಡಿದೆ ಮತ್ತು ಪ್ರತಿಯೊಬ್ಬ ಭಾರತೀಯರು ಬಹಳವಾಗಿ ಗೌರವಿಸುವ ಭಾರತದ ಸಂವಿಧಾನವನ್ನು ಹೇಗೆ ತುಳಿಯಿತು ಎಂಬುದನ್ನು ನಮಗೆ ನೆನಪಿಸುತ್ತದೆ” ಎಂದಿದ್ದಾರೆ.
“ತುರ್ತು ಪರಿಸ್ಥಿತಿಯನ್ನು ಹೇರಲು ಕಾರಣವಾದ ಮನಸ್ಥಿತಿಯು ಅದನ್ನು ಹೇರಿದ ಪಕ್ಷದಲ್ಲಿ ಹೆಚ್ಚು ಜೀವಂತವಾಗಿದೆ. ಅವರು ತಮ್ಮ ಟೋಕನಿಸಂ ಮೂಲಕ ಸಂವಿಧಾನದ ಬಗೆಗಿನ ತಮ್ಮ ತಿರಸ್ಕಾರವನ್ನು ಮರೆಮಾಡುತ್ತಿದ್ದಾರೆ ಆದರೆ ಭಾರತದ ಜನರು ಅವರ ವರ್ತನೆಗಳನ್ನು ನೋಡಿದ್ದಾರೆ ಮತ್ತು ಅದಕ್ಕಾಗಿಯೇ ಅವರನ್ನು ಮತ್ತೆ ಮತ್ತೆ ತಿರಸ್ಕರಿಸಿದ್ದಾರೆ” ಎಂದಿದ್ದಾರೆ.
“ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಮೇಲಿನ ಪ್ರೀತಿಯನ್ನು ಹೇಳಿಕೊಳ್ಳುವ ಹಕ್ಕು ಇಲ್ಲ. ಅಸಂಖ್ಯಾತ ಸಂದರ್ಭಗಳಲ್ಲಿ 356 ನೇ ವಿಧಿಯನ್ನು ಹೇರಿದವರು, ಪತ್ರಿಕಾ ಸ್ವಾತಂತ್ರ್ಯವನ್ನು ನಾಶಮಾಡುವ ಮಸೂದೆಯನ್ನು ತಂದವರು, ಫೆಡರಲಿಸಂ ಅನ್ನು ನಾಶಪಡಿಸಿದವರು ಮತ್ತು ಸಂವಿಧಾನದ ಪ್ರತಿಯೊಂದು ಅಂಶವನ್ನು ಉಲ್ಲಂಘಿಸಿದವರು ಇದೇ ಜನರು.
ಕೇವಲ ಅಧಿಕಾರಕ್ಕೆ ಅಂಟಿಕೊಳ್ಳುವುದಕ್ಕಾಗಿ, ಆಗಿನ ಕಾಂಗ್ರೆಸ್ ಸರ್ಕಾರವು ಪ್ರತಿಯೊಂದು ಪ್ರಜಾಸತ್ತಾತ್ಮಕ ತತ್ವವನ್ನು ಕಡೆಗಣಿಸಿ ರಾಷ್ಟ್ರವನ್ನು ಜೈಲಿನಂತೆ ಮಾಡಿತು. ಕಾಂಗ್ರೆಸ್ ಪಕ್ಷವನ್ನು ಒಪ್ಪದ ವ್ಯಕ್ತಿಗೆ ಚಿತ್ರಹಿಂಸೆ ಮತ್ತು ಕಿರುಕುಳ ನೀಡಲಾಯಿತು. ದುರ್ಬಲ ವರ್ಗಗಳನ್ನು ಗುರಿಯಾಗಿಸಲು ಸಾಮಾಜಿಕವಾಗಿ ಪ್ರತಿಗಾಮಿ ನೀತಿಗಳನ್ನು ಬಿಚ್ಚಿಡಲಾಯಿತು” ಎಂದು ಮೋದಿ ಕಟುವಾಗಿ ಟೀಕಿಸಿದ್ದಾರೆ.
Today is a day to pay homage to all those great men and women who resisted the Emergency.
The #DarkDaysOfEmergency remind us of how the Congress Party subverted basic freedoms and trampled over the Constitution of India which every Indian respects greatly.
— Narendra Modi (@narendramodi) June 25, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.