ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮುಂಬರುವ ಸಾಮಾನ್ಯ ಬಜೆಟ್ ಹಿನ್ನೆಲೆಯಲ್ಲಿ ಸಲಹೆ ಸೂಚನೆಗಳನ್ನು ಪಡೆಯಲು ನವದೆಹಲಿಯಲ್ಲಿ ವ್ಯಾಪರ ಮತ್ತು ಸೇವಾ ಪ್ರತಿನಿಧಿಗಳೊಂದಿಗೆ ಏಳನೇ ಪೂರ್ವ ಬಜೆಟ್ ಸಮಾಲೋಚನೆಯನ್ನು ನಡೆಸಿದರು.
ಬಜೆಟ್ ಪೂರ್ವ ಸಮಾಲೋಚನಾ ಸಭೆಯಲ್ಲಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ, ಮುಖ್ಯ ಆರ್ಥಿಕ ಸಲಹೆಗಾರ ವಿ.ಅನಂತ ನಾಗೇಶ್ವರನ್, ಹಣಕಾಸು ಕಾರ್ಯದರ್ಶಿ ಟಿ.ವಿ.ಸೋಮನಾಥನ್, ವೆಚ್ಚ ಇಲಾಖೆಯ ಕಾರ್ಯದರ್ಶಿ, ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಗಳು, ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯದ ಅಧಿಕಾರಿಗಳು ಭಾಗವಹಿಸಿದ್ದರು.
ಕಳೆದ ವಾರವೂ, ಹಣಕಾಸು ಸಚಿವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಿದ್ದರು. ರೈತ ಸಂಘಗಳ ಪ್ರತಿನಿಧಿಗಳು ಮತ್ತು ಕೃಷಿ ಅರ್ಥಶಾಸ್ತ್ರಜ್ಞರೊಂದಿಗೂ ಸಮಾಲೋಚನೆಗಳನ್ನು ನಡೆಸಿದರು.
ಈ ಹಿಂದೆ, ಅವರು ಹಣಕಾಸು ಮತ್ತು ಬಂಡವಾಳ ಮಾರುಕಟ್ಟೆ ವಲಯಗಳಲ್ಲಿನ ಪ್ರಮುಖ ತಜ್ಞರು, ಉದ್ಯಮದ ನಾಯಕರು ಮತ್ತು ಸಂಘಗಳು ಮತ್ತು ಪ್ರಮುಖ ಅರ್ಥಶಾಸ್ತ್ರಜ್ಞರೊಂದಿಗೆ ಇದೇ ರೀತಿಯ ಸಭೆಗಳನ್ನು ನಡೆಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.